ಬೆಂಗಳೂರು : ಕರೋನಾ ಹಾವಳಿ, ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಶಾಕ್ ಕೊಡಲು ಹೊರಟಿದೆ. ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಬಿಎಂಟಿಸಿ ಪ್ರಯಾಣ ದರ ಏರಿಕೆಯ ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳು ಅಂತಿಮ ನಿರ್ಧಾ ರ ತೆಗೆದುಕೊಳ್ಳಲಿದ್ದಾರೆ. ಸಾರಿಗೆ ಸಚಿವ ಲಕ್ಷ್ಮಣ ಸವದಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಈಗಾಗಲೇ ಪೆಟ್ರೋಲ್, ಡಿಸೇಲ್ ದರ ರಿಕೆ, ಅಡುಗೆ ಅನಿಲ ಏರಿಕೆಯಿಂದ ರಾಜ್ಯದ ಜನತೆ ತತ್ತರಿಸಿದ್ದಾರೆ. ಈ ಮಧ್ಯೆ, ಬಿಎಂಟಿಸಿ ಟಿಕೆಟ್ ದರ ಏರಿಕೆಯಾಗುವ ಬಗ್ಗೆ ಸಾರಿಗೆ ಸಚಿವರು ಸೂಚನೆ ನೀಡಿದ್ದಾರೆ. ಟಿಕೆಟ್ ದರ ಏರಿಕೆ ಬಗ್ಗೆ ಸಿಎಂ ಜೊತೆ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ. ಪ್ರಯಾಣ ದರ ಷ್ಟು ಏರಿಕೆಯಾಗಲಿದೆ ಎಂಬ ಬಗ್ಗೆ ಇನ್ನೂ ಏನನ್ನೂ ಹೇಳಿಲ್ಲ. ಆದರೆ ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.
PublicNext
25/02/2021 08:30 pm