ನವದೆಹಲಿ: ತೈಲೋತ್ಪನ್ನಗಳ ದರಗಳು ಮತ್ತೆ ಏರಿಕೆ ಕಂಡಿದ್ದು ವಾಹನ ಸವಾರರಿಗೆ ಹೊರೆಯಾಗುತ್ತಿದೆ.
ಮೂರು ದಿನಗಳ ಬಳಿಕ ಮತ್ತೆ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 24 ಪೈಸೆ ಮತ್ತು ಡೀಸೆಲ್ ದರದಲ್ಲಿ 15 ಪೈಸೆ ಏರಿಕೆಯಾಗಿದೆ.
ಭಾರತದಲ್ಲಿ ತೈಲೋತ್ಪನ್ನಗಳ ದರಗಳಲ್ಲಿ 24 ರಿಂದ 15 ಪೈಸೆಯಷ್ಟು ಏರಿಕೆಯಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ 91.17 ರೂ. ಗೆ ಏರಿಕೆಯಾಗಿದ್ದು, ಡೀಸೆಲ್ ದರ ಕೂಡ 81.47 ರೂ. ಗೆ ಏರಿಕೆಯಾಗಿದೆ.
ಇನ್ನು ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 94.22 ರೂಗೆ ಏರಿಕೆಯಾಗಿದೆ. ಪ್ರತೀ ಲೀಟರ್ ಪೆಟ್ರೋಲ್ ದರ 86.37 ರೂ ಗೆ ಏರಿಕೆಯಾಗಿದೆ. ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 24 ಪೈಸೆ ಏರಿಕೆಯಾಗಿ ಪ್ರತೀ ಲೀಟರ್ ಪೆಟ್ರೋಲ್ ದರ 97.57 ಏರಿಕೆಯಾಗಿದ್ದು, ಡೀಸೆಲ್ ದರ 15 ಪೈಸೆ ಏರಿಕೆಯಾಗಿ ಪ್ರತೀ ಲೀಟರ್ ಡೀಸೆಲ್ ದರ 88.60 ರೂ. ಗೆ ಏರಿಕೆಯಾಗಿದೆ.
PublicNext
27/02/2021 01:50 pm