ಚಿತ್ರದುರ್ಗ: ರೈತರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿ ಎಂದು ಲಕ್ಷ, ಲಕ್ಷ ರೂಪಾಯಿ ಖರ್ಚು ಮಾಡಿ ಕಿರು ತರಕಾರಿ ಮಾರುಕಟ್ಟೆಯನ್ನು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ನಿರ್ಮಾಣ ಮಾಡಲಾಗಿದೆ. ಆದರೆ ಈ ಮಾರುಕಟ್ಟೆ ನಿರ್ಮಾಣವಾಗಿ ಸುಮಾರು ವರ್ಷಗಳೇ ಕಳೆದರೂ ಇದುವರೆಗೂ ಉದ್ಘಾಟನೆ ಭಾಗ್ಯ ಕಂಡಿಲ್ಲ ಎಂಬ ಆರೋಪ ಕೇಳಿ ಬಂದಿದೆ.
ಇದೀಗ ಕಿರು ತರಕಾರಿ ಮಾರುಕಟ್ಟೆಯನ್ನು ಮೂತ್ರ ವಿಸರ್ಜನೆ ಬಳಕೆಯ ತಾಣವಾಗುತ್ತಿದೆ. ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇನ್ನಾದರೂ ನೆನೆಗುದಿಗೆ ಬಿದ್ದಿರುವ ಕಿರು ತರಕಾರಿ ಮಾರುಕಟ್ಟೆಯ ಬಗ್ಗೆ ಹೊಸದುರ್ಗ ಶಾಸಕ ಗೂಳಿಹಟ್ಟಿ ಡಿ ಶೇಖರ್ ಹಾಗೂ ಪುರಸಭೆ ಅಧಿಕಾರಿಗಳು ಮುಂದಿನ ಕ್ರಮ ಕೈಗೊಳ್ಳುತ್ತಾರಾ ಕಾದು ನೋಡಬೇಕಿದೆ.
PublicNext
23/08/2021 12:00 pm