ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದುಬಾರಿ ದುನಿಯಾ : ಗ್ಯಾಸ್ ಬೆಲೆ ಗಗನಕ್ಕೆ 25 ರೂ.ಏರಿಕೆ

ನವದೆಹಲಿ: ದಿನದಿಂದ ದಿನಕ್ಕೆ ಜನಸಾಮಾನ್ಯರ ಬದುಕು ದುಸ್ಥರವಾಗುತ್ತಿದೆ. ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಗಾಯದ ಮೇಲೆ ಬರೆ ಎಳೆದಂತಾಗುತ್ತಿದೆ. ಸದ್ಯ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಹೊರೆಯ ನಡುವೆಯೇ ಸೆಪ್ಟೆಂಬರ್ 1ನೇ ತಾರೀಕಿನಿಂದಲೇ ಅನ್ವಯವಾಗುವಂತೆ ಸಬ್ಸಿಡಿ ರಹಿತ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು ಮತ್ತೆ 25 ರೂಪಾಯಿಯಂತೆ ಪೆಟ್ರೋಲಿಯಂ ಕಂಪನಿಗಳು ಏರಿಕೆ ಮಾಡಿರುವುದಾಗಿ ಎಎನ್ ಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.

ಬೆಂಗಳೂರಿನಲ್ಲಿ ಸಬ್ಸಿಡಿ ರಹಿತ ಪ್ರತಿ ಎಲ್ ಪಿಜಿ ಸಿಲಿಂಡರ್ ಬೆಲೆ ಇದೀಗ 862.50 ರೂಪಾಯಿಗೆ ಏರಿಕೆಯಾದಂತಾಗಿದೆ. ರಾಷ್ಟ್ರರಾಜಧಾನಿ ದೆಹಲಿಯಲ್ಲಿ 14.2ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ ಈಗ 884.50 ರೂಪಾಯಿಗೆ ಹೆಚ್ಚಳವಾದಂತಾಗಿದೆ. ಕಳೆದ ಒಂದು ತಿಂಗಳೊಳಗೆ ತೈಲ ಕಂಪನಿಗಳು ಸತತ ಎರಡನೇ ಬಾರಿಗೆ ಅಡುಗೆ ಅನಿಲ ಬೆಲೆಯನ್ನು ಹೆಚ್ಚಿಸಿದಂತಾಗಿದೆ. ಆಗಸ್ಟ್ 18ರಂದು ಎಲ್ ಪಿಜಿ ಪ್ರತಿ ಸಿಲಿಂಡರ್ ಬೆಲೆಯನ್ನು 25 ರೂಪಾಯಿ ಏರಿಕೆ ಮಾಡಲಾಗಿತ್ತು. ಇದೀಗ ಸೆಪ್ಟೆಂಬರ್ 1ರಂದು ಮತ್ತೆ 25 ರೂಪಾಯಿ ಏರಿಕೆ ಮಾಡಲಾಗಿದೆ.

ವಾಣಿಜ್ಯ ಬಳಕೆಯ 19 ಕೆಜಿ ಪ್ರತಿ ಸಿಲಿಂಡರ್ ಬೆಲೆಯನ್ನು 19 ರೂಪಾಯಿಗೆ ಏರಿಕೆ ಮಾಡುವ ಮೂಲಕ ಪ್ರತಿ ಸಿಲಿಂಡರ್ ಬೆಲೆ 1,693 ರೂಪಾಯಿಗೆ ಹೆಚ್ಚಳವಾದಂತಾಗಿದೆ.

Edited By : Nirmala Aralikatti
PublicNext

PublicNext

01/09/2021 12:09 pm

Cinque Terre

61.85 K

Cinque Terre

106