ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದಲ್ಲಿ ಹಂದಿ ಹಿಡಿಯುವ ಕಾರ್ಯಾಚರಣೆ ಆರಂಭವಾಗಿದೆ. ನಗರದಲ್ಲಿ ಹೆಚ್ಚುತ್ತಿರುವ ಹಂದಿ ಮತ್ತು ನಾಯಿಗಳ ಹಾವಳಿ ಎಂಬ ಶೀರ್ಷಿಕೆ ಅಡಿಯಲ್ಲಿ ಪಬ್ಲಿಕ್ ನೆಕ್ಸ್ಟ್ ವರದಿ ಬಿತ್ತರಿಸಿತ್ತು.
ನಗರದ ಗಲ್ಲಿ ಗಲ್ಲಿಗಳಲ್ಲಿ, ರಸ್ತೆಗಳಲ್ಲಿ ವಾಹನ ಸವಾರರಿಗೆ ತುಂಬಾ ತೊಂದರೆಯಾಗುತ್ತಿತ್ತು, ಜೊತೆಗೆ ಹಂದಿಗಳಿಂದ ಸಾಕಷ್ಟು ಸಮಸ್ಯೆ ಉಂಟಾಗುತ್ತಿತ್ತು. ಹಂದಿಗಳನ್ನು ಸ್ಥಳಾಂತರ ಮಾಡಬೇಕು ಎಂದು ಮಾಜಿ ನಗರಸಭೆ ಸದಸ್ಯ ಜಿ. ಪ್ರೇಮ್ ಕುಮಾರ್ ಒತ್ತಾಯಿಸಿದ್ದರು.
ವರದಿಯಿಂದ ಎಚ್ಚೆತ್ತುಕೊಂಡ ನಗರಸಭೆ ಅಧಿಕಾರಿಗಳು ಹಂದಿ ಹಿಡಿಯುವ ಕಾರ್ಯಾಚರಣೆಗೆ ಮುಂದಾಗಿದ್ದಾರೆ.
ಈ ಕಾರ್ಯಾಚರಣೆಗೆ ಕ್ರಮ ಕೈಗೊಂಡಿರುವ ನಗರಸಭೆ ಅಧಿಕಾರಿಗಳಿಗೆ ಹಾಗೂ ನಗರಸಭೆ ಜನಪ್ರತಿನಿಧಿಗಳ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
PublicNext
01/09/2021 12:11 pm