ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ ಜಿಲ್ಲೆಯಲ್ಲಿ ಸರಳವಾಗಿ ಗಣೇಶ ಚತುರ್ಥಿ ಆಚರಿಸಲು ಮನವಿ : ಜಿಲ್ಲಾಧಿಕಾರಿ

ಚಿತ್ರದುರ್ಗ : ಜಿಲ್ಲೆಯಲ್ಲಿ ಗಣೇಶ ಚತುರ್ಥಿಯನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ಮತ್ತು ತಮ್ಮ-ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ, ಖಾಸಗಿ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಟ ಸಂಖ್ಯೆಯೊಂದಿಗೆ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮನವಿ ಮಾಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸರಳ ಗಣೇಶೋತ್ಸವ ಆಚರಿಸುವ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಸರಳ ಗಣೇಶೋತ್ಸವ ಆಚರಿಸುವ ಸಂಬಂಧ ಸರ್ಕಾರ ಪರಿಷ್ಕಂತ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು, ಸರ್ಕಾರದ ಮಾರ್ಗಸೂಚಿ ಅನ್ವಯ ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕು ಅಡಿ ಎತ್ತರ ಮೀರದಂತೆ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವುದು ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಪ್ರತಿಷ್ಠಾಪಿಸಬೇಕು.

ಪಾರಂಪರಿಕ ಗಣೇಶೋತ್ಸವಕ್ಕಾಗಿ ಗಣೇಶೋತ್ಸವ ಸಮಿತಿಗಳು, ಮಂಡಳಿಗಳು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಸ್ಥಳೀಯ ಆಡಳಿತದಿಂದ ಪೂರ್ವಾನುಮತಿ ಪಡೆಯಬೇಕು. ನಗರ ಪ್ರದೇಶಗಳಲ್ಲಿ ವಾರ್ಡಿಗೆ ಒಂದರಂತೆ ಸಾರ್ವಜನಿಕ ಗಣೇಶೋತ್ಸವವನ್ನು ಮಾತ್ರ ಆಚರಿಸಲು ಪ್ರೋತ್ಸಾಹಿಸುವುದು. ಗಣೇಶ ಆಚರಣೆಯನ್ನು ಗರಿಷ್ಠ 5 ದಿನಗಳಿಗಿಂತ ಹೆಚ್ಚಿನ ದಿನ ಆಚರಿಸುವಂತಿಲ್ಲ ಎಂದು ಹೇಳಿದರು.

ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಸಾರ್ವಜನಿಕ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸಬೇಕು. ಒಮ್ಮೆಲೆ 20 ಕ್ಕಿಂತ ಹೆಚ್ಚಿನ ಜನ ಸೇರದಂತೆ ಭಕ್ತಾಧಿಗಳಿಗೆ ಅನುವು ಮಾಡಬೇಕು. ಗಣೇಶ ಆಚರಣೆಯ ಆಯೋಜಕರು ಕೋವಿಡ್-19ರ ನೆಗೆಟಿವ್ ರಿಪೋರ್ಟ್ ಮತ್ತು ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣ ಪತ್ರ ಹೊಂದಿರುವುದು ಕಡ್ಡಾಯ. ಗಣೇಶ ಆಚರಣೆಯ ಆಯೋಜಿತ ಸ್ಥಳಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಆಯೋಜಕರು ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು.

ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ಗಣೇಶ ಪ್ರತಿಷ್ಠಾಪನೆ ಮಾಡಬೇಕು. ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕಂತಿಕ, ಸಂಗೀತ, ನೃತ್ಯ ಹಾಗೂ ಮುಖ್ಯವಾಗಿ ಡಿ.ಜೆ ಮೂಲಕ ಹಾಗೂ ಇನ್ನಿತರೆ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ ಎಂದರು.

ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಸ್ಥಳೀಯ ಆಡಳಿತದಿಂದ ಅನುಮತಿ ಪಡೆದು ಪೊಲೀಸ್ ಇಲಾಖೆಯಿಂದ ಎನ್‍ಒಸಿ ಪಡೆಯುವುದು ಕಡ್ಡಾಯವಾಗಿದೆ ಎಂದು ಹೇಳಿದರು.

ಗಣೇಶ ಮೂರ್ತಿ ವಿಸರ್ಜನೆಗೆ ಜಿಲ್ಲೆಯಲ್ಲಿ 31 ಸ್ಥಳಗಳ ಗುರುತು: ಗಣೇಶ ಹಬ್ಬದ ಪ್ರಯುಕ್ತ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲು ನಗರ ಸ್ಥಳೀಯ ಸಂಸ್ಥೆಗಳ ವತಿಯಿಂದ ಜಿಲ್ಲೆಯಾದ್ಯಂತ ಒಟ್ಟು 31 ಸ್ಥಳಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸತೀಶ್ ರೆಡ್ಡಿ ಮಾಹಿತಿ ನೀಡಿದರು..

ಪಬ್ಲಿಕ್ ನೆಕ್ಸ್ಟ್ ಪ್ರತಿನಿಧಿ ಚಿತ್ರದುರ್ಗ..

Edited By : Nirmala Aralikatti
PublicNext

PublicNext

07/09/2021 01:53 pm

Cinque Terre

27.17 K

Cinque Terre

0

ಸಂಬಂಧಿತ ಸುದ್ದಿ