ಬೆಂಗಳೂರು : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಬೆಂಗಳೂರು-ಮೈಸೂರು ನಡುವೆ ನಿರ್ಮಾಣಗೊಳ್ಳುತ್ತಿರುವ ದಶಪಥ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನ, ಆಟೋ ಮತ್ತು ಟ್ರ್ಯಾಕ್ಟರ್‌ಗಳ ಸಂಚಾರ ನಿಷೇಧಿಸಲು ನಿರ್ಧರಿದೆ ಎನ್ನಲಾಗಿದೆ.
ಬೆಂಗಳೂರು-ಮೈಸೂರು 2022ರಲ್ಲಿ ದಶಪಥ ರಸ್ತೆ ಪೂರ್ಣ ಪ್ರಮಾಣದಲ್ಲಿ ಸಂಚಾರಕ್ಕೆ ಮುಕ್ತವಾದ ಬಳಿಕ ದ್ವಿಚಕ್ರ ವಾಹನ, ಆಟೋ ಮತ್ತು ಟ್ರ್ಯಾಕ್ಟರ್ ಗಳ ಸಂಚಾರ ನಿಷೇಧಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತ ತಡೆಯುವ ಉದ್ದೇಶದಿಂದ ಈ ನಿಯಮ ಜಾರಿಗೆ ತರಲು ಮುಂದಾಗಿದ್ದು, ವಾಹನಗಳು ಅತಿ ವೇಗದಲ್ಲಿ ಸಾಗುವುದರಿಂದ ನಿಧಾನಗತಿಯ ವಾಹನಗಳಿಗೆ ಅವಕಾಶ ನಿರಾಕರಿಸಲಾಗುತ್ತಿದೆ ಎನ್ನಲಾಗಿದೆ. ನಿಧಾನಗತಿಯ ವಾಹನಗಳಿಗೆ ಸರ್ವಿಸ್ ರಸ್ತೆಯಲ್ಲಿಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
PublicNext
14/09/2021 07:59 am