ಬೆಂಗಳೂರು : ನಗರದಲ್ಲಿ ಇನ್ಮುಂದೆ 30*40 ಸೈಟಿನಲ್ಲಿ ಮನೆ ಕಟ್ಟುವವರು ಮಳೆ ನೀರು ಕೊಯ್ಲು ಕಡ್ಡಾಯ. ಈ ಕುರಿತು, ಬೆಂಗಳೂರು ನೀರು ಸರಬರಾಜು ಮತ್ತು ಗ್ರಾಮಸಾರ ಚರಂಡಿ ವ್ಯವಸ್ಥೆ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರಗೊಡಿದೆ. ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ 30*40 ಚದರಡಿ ಮೇಲ್ಪಟ್ಟ ನಿವೇಶನದಲ್ಲಿ ಮನೆ ಕಟ್ಟುವವರಿಗೆ ಮಳೆನೀರು ಕೊಯ್ಲು ಕಡ್ಡಾಯವಾಗಲಿದೆ. 30*40 ಸೈಟ್ ಗಳಲ್ಲಿ ಈಗಾಗಲೇ ಮನೆಗಳನ್ನು ಕಟ್ಟಿರುವವರಿಗೆ ಈ ನಿಯಮದಿಂದ ವಿನಾಯಿತಿಯಿದೆ.
ಈ ವಿಧೇಯಕದ ಜತೆಗೆ ಗುರುವಾರ (ಸೆಪ್ಟೆಂಬರ್ 16) ಕೃಷಿ ಸಂಬಂಧಿ ಕೀಟಗಳು ಮತ್ತು ರೋಗಗಳ ತಿದ್ದುಪಡಿ ವಿಧೇಯಕಕ್ಕೆ ಸಹ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ.
ಈ ಬಾರಿಯ ಕಲಾಪದಲ್ಲಿ ಒಟ್ಟು 10 ವಿಧೇಯಕಗಳನ್ನು ಮಂಡಿಸಲಾಗಿದೆ. ಬೆಂಗಳೂರು ನೀರು ಸರಬರಾಜು ಮತ್ತು ಗ್ರಾಮಸಾರ ವ್ಯವಸ್ಥೆ ತಿದ್ದುಪಡಿ ವಿಧೇಯಕ, ಬಂಧಿಗಳ ಗುರುತಿಸುವಿಕೆ ವಿಧೇಯಕ, ದಂಡ ಪ್ರಕ್ರಿಯಾ ಸಂಹಿತೆ ವಿಧೇಯಕ, ಬಂಧೀಖಾನೆ ಅಭಿವೃದ್ಧಿ ಮಂಡಳಿ ವಿಧೇಯಕ, ಕೃಷಿ ಸಂಬಂಧಿ ಕೀಟಗಳು ಮತ್ತು ರೋಗಗಳ ತಿದ್ದುಪಡಿ ವಿಧೇಯಕ, ಸ್ಟ್ಯಾಂಪ್ ತಿದ್ದುಪಡಿ ವಿಧೇಯಕ, ಖಾದಿ ಮತ್ತು ಗ್ರಾಮೋದ್ಯೋಗಗಳ ತಿದ್ದುಪಡಿ ವಿಧೇಯಕ, ಪೌರಸಭೆಗಳ ಮತ್ತು ಇತರೆ ಕೆಲವು ಕಾನೂನು ತಿದ್ದುಪಡಿ ವಿಧೇಯಕ, ಸ್ಥಳೀಯ ನಿಧಿ ಪ್ರಾಧಿಕಾರಗಳ ಆರ್ಥಿಕ ಹೊಣೆಗಾರಿಕೆ ವಿಧೇಯಕ, ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕಗಳನ್ನು ವಿಧಾನಸಭಾ ಅಧಿವೇಶನದಲ್ಲಿ ಮಂಡಿಸಲಾಗಿದೆ.
PublicNext
16/09/2021 06:32 pm