ಬೆಂಗಳೂರು: 2018ರ ಬಳಿಕ ಇದೂವರೆಗೂ ಮಂತ್ರಿ ಮಾಲ್ ಆಸ್ತಿ ತೆರಿಗೆ ಕಟ್ಟಿಲ್ಲ. ಬರೋಬ್ಬರಿ 27 ಕೋಟಿ ರೂಪಾಯಿ ತೆರಿಗೆಯನ್ನು ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಮಾಲ್ ಗೆ ಬೀಗ ಜಡಿಯಲಾಗಿದೆ. ಬಾಕಿ ಉಳಿಸಿಕೊಂಡಿರುವ ತೆರಿಗೆ ಕಟ್ಟುವಂತೆ ಸಾಕಷ್ಟು ನೊಟಿಸ್ ಕಳುಹಿಸಿದರೂ ಕ್ಯಾರೆ ಎನ್ನದ ಮಂತ್ರಿ ಮಾಲ್ ಗೆ ಬಿಬಿಎಂಪಿ ಅಧಿಕಾರಿಗಳು ಶಾಕ್ ಕೊಟ್ಟಿದೆ.
ಅಭಿಷೇಕ್ ಡೆವಲಪರ್ಸ್ ಹೆಸರಿನಲ್ಲಿ ಬಿಬಿಎಂಪಿಗೆ ಮಂತ್ರಿ ಮಾಲ್ ತೆರಿಗೆ ಪಾವತಿ ಮಾಡುತ್ತಿದೆ. ಆದರೆ, ಇದುವರೆಗೂ ಬಾಕಿ ಬಿಲ್ ಕಟ್ಟದಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಬಿಬಿಎಂಪಿ ಪಶ್ಚಿಮ ವಲಯದಲ್ಲಿ ಅತೀ ದೊಡ್ಡ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಪಟ್ಟಿಯಲ್ಲಿ ಮಂತ್ರಿ ಮಾಲ್ ಮೊದಲ ಸ್ಥಾನದಲ್ಲಿದೆ.
ತೆರಿಗೆ ಕಟ್ಟುವುದಾಗಿ ಮುಚ್ಚಳಿಕೆ ಬರೆದುಕೊಟ್ಟಿದ್ದ ಮಂತ್ರಿ ಮಾಲ್ ಮತ್ತೆ ತೆರಿಗೆ ಕಟ್ಟದೇ ವಂಚಿಸಿತ್ತು. ಹೀಗಾಗಿ ಇಂದು ಮಂತ್ರಿ ಮಾಲ್ ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಜಡಿದಿದ್ದಾರೆ.
PublicNext
30/09/2021 11:39 am