ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಣ್ಣಗಾಗದ ಪ್ರತಿಭಟನೆಯ ಕಾವು : ಅಖಿಲೇಶ್ ಪೊಲೀಸ್ ವಶಕ್ಕೆ

ಲಕ್ನೋ: ಚುನಾವಣೆ ಹೊಸ್ತಿಲಿನಲ್ಲಿರುವ ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ಭಾನುವಾರ ನಡೆದ ಹಿಂಸಾಚಾರ ತೀವ್ರ ಸ್ವರೂಪ ಪಡೆದಿದೆ. ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಉತ್ತರ ಪ್ರದೇಶದಲ್ಲಿ ಇಬ್ಬರು ಸಚಿವರ ಭೇಟಿ ವಿಚಾರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದಾರೆ.

ಈ ಘಟನೆಯ ನಂತರವು ಪ್ರತಿಭಟನೆ ಮತ್ತಷ್ಟು ಉಗ್ರವಾಗಿದೆ. ರಾಜಕೀಯ ನಾಯಕರುಗಳು ಪ್ರತಿಭಟನೆಗೆ ಬೆಂಬಲ ಸೂಚಿಸುತ್ತಿರುವುದರಿಂದ ಪ್ರತಿಭಟನೆ ತೀವ್ರ ಸ್ವರೂಪಕ್ಕೆ ತಿರುಗಿದೆ. ಸದ್ಯ ಸಮಾಜವಾದಿ ಪಕ್ಷದ ಅಧ್ಯಕ್ಷ , ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ರಾಮ್ ಗೋಪಾಲ್ ಯಾದವ್ , ಪ್ರಗತಿಶೀಲ್ ಸಮಾಜವಾದಿ ಪಕ್ಷದ ಸ್ಥಾಪಕ ಶಿವಪಾಲ್ ಯಾದವ್ ಸೇರಿದಂತೆ ಹಲವು ಪ್ರಮುಖ ನಾಯಕರನ್ನು ಲಕ್ನೋ ದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರತಿಭಟನೆ ವೇಳೆ ಸೆಕ್ಷನ್ 144 ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿ ಅಖಿಲೇಶ್ ಯಾದವ್ ಅವರನ್ನು ಪೊಲೀಸರು ವಶಕ್ಕೆ ಪಡಿಸಿದ್ದಾರೆ.

ಸದ್ಯ ಉತ್ತರ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ. ದೇಶಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸುವಂತೆ ರೈತರಿಗೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ. ಸುಪ್ರೀಂ ನ್ಯಾಯಮೂರ್ತಿ ನೇತೃತ್ವದಲ್ಲಿ ಘಟನೆ ಬಗ್ಗೆ ತನಿ ಖೆಗೂ ಆ ಗ್ರಹಿಸಿದೆ.

Edited By : Nirmala Aralikatti
PublicNext

PublicNext

04/10/2021 12:31 pm

Cinque Terre

30.85 K

Cinque Terre

3

ಸಂಬಂಧಿತ ಸುದ್ದಿ