ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿತ್ಯ ರಸ್ತೆಯಲ್ಲಿಯ ಗುಂಡಿಗಳಿಂದ ಅಪಘಾತಗಳು ಹೆಚ್ಚುತ್ತಲೇ ಇವೆ. ಇದರಿಂದ ಬೇಸತ್ತ ಸಾರ್ವಜನಿಕರು ವಿನೂತನ ರೀತಿಯಲ್ಲಿ ಪ್ರತಿಭಟನೆ ಮಾಡಿ ಬಿಬಿಎಂಪಿ ಮತ್ತು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಹೌದು ಯಲಹಂಕ ವ್ಯಾಪ್ತಿಯ ಕೆ.ಆರ್ ಪುರಂ ಮತ್ತು ಬೆಟ್ಟಗಳ್ಳಿ ರಸ್ತೆಯ ಗುಂಡಿಯೊಂದರಲ್ಲಿ ಬಿಬಿಎಂಪಿ ಕಮಿಷನರ್ ಗೌರವ್ ಗುಪ್ತಾ ಹಾಗೂ ಎಂಜಿನಿಯರ್ ಹೆಸರಿನಲ್ಲಿ ಪಿಂಡ ಪ್ರದಾನ ಮಾಡಿದ್ದಾರೆ.
ಈ ಮೂಲಕ ವಿಭಿನ್ನ ರೀತಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಹೋರಾಟಗಾರ ಹೆ.ಎಂ ವೆಂಕಟೇಶ್ ಹಾಗೂ ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸ್ಥಳೀಯರು ಭಾಗಿಯಾಗಿದ್ದರು.
PublicNext
19/10/2021 03:17 pm