ದಾವಣಗೆರೆ: ಹರಿಹರ ತಾಲೂಕಿನ ದೇವರ ಬೆಳಕೆರೆ ಪಿಕಪ್ ಡ್ಯಾಂನಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ.
ಅಕಾಲಿಕ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಈಗ ಮತ್ತೊಂದು ಭಯ ಶುರುವಾಗಿದೆ. ಪಿಕ್ ಅಪ್ ಡ್ಯಾಂನ ಕೆಳಗಡೆ ಬೆಳೆ ಬೆಳೆದಿರುವ ರೈತರಿಗೆ ಡ್ಯಾಂನಲ್ಲಿ ಬಿರುಕು ಬಿಟ್ಟಿರುವುದು ದುಗುಡ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ದೇವರಬೆಳಕೆರೆ ಪಿಕಪ್ ಡ್ಯಾಂ ನಲ್ಲಿ ನೀರು ಸಂಗ್ರಹಣೆ ಮಾಡಲಾಗಿದೆ. ಸಾವಿರಾರು ಎಕರೆ ಪ್ರದೇಶಕ್ಕೆ ನೀರುಣಿಸುವ ಈ ಪಿಕ್ ಅಪ್ ಅಣೆಕಟ್ಟು ನಿರ್ಮಾಣವಾಗಿ ಸುಮಾರು 43 ವರ್ಷಗಳೇ ಕಳೆದಿವೆ. ಡ್ಯಾಂನ ಎಡಗಡೆ ಭಾಗದಲ್ಲಿ ಬಿರುಕು ಕಾಣಿಸಿಕೊಂಡಿದೆ. ಒಂದು ವೇಳೆ ಡ್ಯಾಮ್ ಒಡೆದರೆ 10 ಹಳ್ಳಿ, ಸಾವಿರಾರು ಎಕರೆ ಕೃಷಿ ಭೂಮಿ ನೀರಿನಿಂದ ಆವೃತವಾಗುವ ಜೊತೆಗೆ ಭಾರೀ ಹಾನಿ ಆಗಲಿದೆ. ಕಳೆದ ಕೆಲ ದಿನಗಳಿಂದ ಸುರಿದ ಮಳೆಯಿಂದಾಗಿ ಭರ್ತಿಯಾದ ಪಿಕಪ್ ಡ್ಯಾಂ ನ 14 ಗೇಟ್ ಗಳ ಮೂಲಕ ನೀರು ಹೊರಬಿಡಲಾಗುತ್ತಿದೆ. ಆದರೆ 14 ಗೇಟ್ ಗಳು ಸೊಪ್ಪು ಸೆದೆ ಸೇರಿದಂತೆ ತ್ಯಾಜ್ಯದಿಂದಾಗಿ ನೀರು ಹೊರಹೊಗುತ್ತಿಲ್ಲ. ಇದೇ ಕಾರಣಕ್ಕೆ ಬಿರುಕು ಬಿಟ್ಟಿರಬಹುದು ಎಂದು ಹೇಳಲಾಗುತ್ತಿದೆ.
PublicNext
24/11/2021 09:54 am