ಬೆಳಗಾವಿ: ಗಡಿನಾಡು ಬೆಳಗಾವಿಯಲ್ಲಿ ಎಂಇಎಸ್ ಮುಖಂಡ ದೀಪಕ ದಳವಿ ಅವರಿಗೆ ಕಪ್ಪು ಮಸಿ ಬಳಿದಿರುವುದನ್ನು ಖಂಡಿಸಿ ನಾಳೆ ಬೆಳಗಾವಿ ಬಂದ್ ಗೆ ಕರೆ ನೀಡಲಾಗಿದೆ ಎಂದು ಮುಖಂಡ ಮನೋಹರ ಕಿಣೇಕರ್ ಹೇಳಿದ್ದಾರೆ.ಈ ಘಟನೆ ಬಗ್ಗೆ ಮಹಾರಾಷ್ಟ್ರ ನಾಯಕರ ಗಮನಕ್ಕೆ ತರುತ್ತೇವೆ. ಶಿವಸೇನೆ, ಎನ್ ಸಿ ಪಿ ಹಾಗೂ ಕಾಂಗ್ರೆಸ್ ನಾಯಕರಿಗೂ ತಿಳಿಸುತ್ತೇವೆ. ಮಹಾಮೇಳಾವ ಮುಗಿದ ಬಳಿಕ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುತ್ತೇವೆ. ನಾಳಿನ ಬಂದ್ ಯಶಸ್ವಿ ಮಾಡಬೇಕು ಎಂದು ಕರೆ ನೀಡಿದರು.
ವ್ಯಾಕ್ಸಿನ್ ಡಿಪೊ ಬಳಿಗೆ ಬಂದ ಕರ್ನಾಟಕ ನವನಿರ್ಮಾಣ ಪಡೆಯ ಕಾರ್ಯಕರ್ತರು ಎಂಇಎಸ್ ಮುಖಂಡ ದೀಪಕ ದಳವಿ ಮುಖಕ್ಕೆ ಕಪ್ಪು ಮಸಿ ಬಳಿದರು. ಇದರಿಂದ ಎಂಇಎಸ್ ಮುಖಂಡರು ಆಕ್ರೋಶಗೊಂಡಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಹರಸಾಹಸ ಪಟ್ಟರು. ಕಪ್ಪು ಮಸಿ ಬಳಿದ ಯುವ ಘಟಕದ ಅಧ್ಯಕ್ಷ ಸಂಪತ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದರು.
PublicNext
13/12/2021 03:09 pm