ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು-ಹುಬ್ಬಳ್ಳಿ-ಧಾರವಾಡದಿಂದ ನವದೆಹಲಿಗೆ ಶೀಘ್ರದಲ್ಲೇ ರಾಜಧಾನಿ ಎಕ್ಸ್‌ಪ್ರೆಸ್..!

ಹುಬ್ಬಳ್ಳಿ/ನವದೆಹಲಿ : ಇಂದು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿಯವರು ಬೆಂಗಳೂರು- ಹುಬ್ಬಳ್ಳಿ- ಧಾರವಾಡ ಮುಖಾಂತರ ನವದೆಹಲಿಗೆ ಪ್ರತ್ಯೇಕ ರಾಜಧಾನಿ ಎಕ್ಸ್‌ಪ್ರೆಸ್ ರೈಲನ್ನು ಪ್ರಾರಂಭಿಸಲು ಕೋರಿದ್ದು, ಈ ಹೊಸ ರೈಲಿನ ಅವಶ್ಯಕತೆ ಕುರಿತು ಸಚಿವರಿಗೆ ವಿವರಿಸಿದರು. ಇದೇ ಸಮಯದಲ್ಲಿ ವಿವಿಧ ರೈಲ್ವೆ ಯೋಜನೆಗಳ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಮುಖ್ಯವಾಗಿ ಧಾರವಾಡದಿಂದ ಬೆಂಗಳೂರಿಗೆ 'ವಂದೇ ಭಾರತ' ರೈಲನ್ನು ಪ್ರಾರಂಭಿಸುವಂತೆ ಮನವಿ ಮಾಡಿದರು. ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರು ಸದ್ಯದಲ್ಲೇ ಈ ಎರಡೂ ರೈಲುಗಳ ಸೇವೆಯನ್ನು ಆರಂಭಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಸಚಿವ ಜೋಶಿಯವರು ಕುಸಗಲ್ಲ-ಅಮರಗೋಳ ಹೊಸ ರೈಲ್ವೇ ಬೈಪಾಸ್‌ನ ಎರಡೂ ಬದಿಗಳಲ್ಲಿ ಸರ್ವಿಸ್ ರಸ್ತೆ ನಿರ್ಮಣಕ್ಕೂ ಕೂಡಾ ಕೋರಿದರು. ಈ ಸರ್ವಿಸ್ ರಸ್ತೆ ನಿರ್ಮಾಣದಿಂದ ರೈಲ್ವೆ ಲೈನಿನ ಅಕ್ಕಪಕ್ಕದ ಗ್ರಾಮಗಳ ಸಾರ್ವಜನಿಕರಿಗರ ಅದರಲ್ಲೂ ಮುಖ್ಯವಾಗಿ ರೈತಾಪಿ ವರ್ಗಕ್ಕೆ ಅನುಕೂಲವಾಗಲಿದೆಯೆಂದು ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಈ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದೂ ಸಚಿವ ಜೋಶಿ ತಿಳಿಸಿದ್ದಾರೆ.

ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ರೈಲ್ವೆ ಸಚಿವರಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಅವಶ್ಯಕತೆಯ ಬಗ್ಗೆ ರೈಲ್ವೆ ಸಚಿವರಲ್ಲಿ ವಿನಂತಿಸಲಾಗಿತ್ತು. ಈ ರೈಲು ಪ್ರಯಾಣದಿಂದ ಧಾರವಾಡದಿಂದ ಬೆಂಗಳೂರಿಗೆ ಕೆಲವೇ ಗಂಟೆಗಳಲ್ಲಿ ಕ್ರಮಿಸಬಹುದಾಗಿದೆ. ಈ ರೈಲು ಸಂಚಾರದಿಂದ ಧಾರವಾಡ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜುಗಳು, ಪ್ರತಿಷ್ಠಿತ ಐಐಟಿ, ನೈಋತ್ಯ ರೈಲ್ವೆ ವಲಯ ಕಛೇರಿ, ಇಂಜಿನಿಯರಿಂಗ್ ಕಾಲೇಜುಗಳು ಇದ್ದು ವಾಣಿಜ್ಯ ನಗರದ ಬೆಳವಣಿಗೆಗೆ ಪೂರಕವಾಗಲಿದೆ ಎಂದೂ ಜೋಶಿಯವರು ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

Edited By : Nagaraj Tulugeri
PublicNext

PublicNext

10/01/2022 07:05 pm

Cinque Terre

94.83 K

Cinque Terre

1

ಸಂಬಂಧಿತ ಸುದ್ದಿ