ಬೆಳಗಾವಿ: ಕಳೆದ ಒಂದು ತಿಂಗಳಿಂದ ಗ್ರಾಮದಲ್ಲಿ ಕುಡಿಯುವ ಹಾಗೂ ದಿನ ಬಳಕೆಗೆ ನೀರು ಬಂದಿಲ್ಲ ಎಂದು ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬಾಡಗಿ ಗ್ರಾಮಸ್ಥರು ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೀರಿನ ಸಮಸ್ಯೆ ಬಗ್ಗೆ ಕಳೆದ ಒಂದು ತಿಂಗಳಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರೂ ಯಾವುದೇ ಪರಿಹಾರ ದೊರೆತಿಲ್ಲ. ಇದರಿಂದಾಗಿ ಗ್ರಾಮದ ಮಹಿಳೆಯರು ಖಾಲಿ ಕೊಡ ಹಿಡಿದು ಗ್ರಾಮದ ಮಧ್ಯದಲ್ಲಿ ನಿಂತು ಬೊಬ್ಬೆ ಹಾಕಿ ಸರ್ಕಾರದ ಗಮನ ಸೆಳೆಯುವುದಕ್ಕೆ ಪ್ರಯತ್ನ ಮಾಡಿದ್ದಾರೆ.
ಈ ಕೂಡಲೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇವರಿಗೆ ಶಾಶ್ವತವಾಗಿ ನೀರು ಕೊಡುವ ಕಾರ್ಯಕ್ಕೆ ಮುಂದಾಗಬೇಕಾಗಿದೆ.
PublicNext
12/01/2022 12:10 pm