ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

1200 ಕೋಟಿ ರೂ. ವೆಚ್ಚದಲ್ಲಿ ದ್ವಿಪಥವಿರುವ ಶಿರಾಡಿ ಘಾಟ್ ರಸ್ತೆ ಚತುಷ್ಪಥವಾಗಿ ಮೇಲ್ದರ್ಜೆಗೆ

ಬೆಂಗಳೂರು : 1200 ಕೋಟಿ ರೂ. ವೆಚ್ಚದಲ್ಲಿ ದ್ವಿಪಥವಿರುವ ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಿಸಲು ಸರ್ಕಾಎ ಅಸ್ತು ಎಂದಿದೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಎನ್.ಹೆಚ್.ಎ.ಐ ವತಿಯಿಂದ ಕಾಮಗಾರಿಯನ್ನು ಕೈಗೆತ್ತಿಕೊಂಡು 2 ವರ್ಷದ ಅವಧಿಯಲ್ಲಿ ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಅಗತ್ಯವಿರುವ ಎಲ್ಲಾ ಸಹಕಾರ ಹಾಗೂ ಅನುಮೋದನೆಗಳನ್ನು ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಮಳೆಗಾಲದಲ್ಲಿ ಈ ರಸ್ತೆ ಸಂಚಾರ ಅಸಾಧ್ಯ ಎಂಬತಾಗುತ್ತದೆ. ಹಾಗಾಗಿ ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. ಬೆಂಗಳೂರು ಮತ್ತು ಮಂಗಳೂರಿನ ಸಂಪೂರ್ಣ ಮಾರ್ಗ ಏಕರೀತಿಯ ಚತುಷ್ಪಥ ರಸ್ತೆಯಾಗಲಿದೆ. ಪರಿಸರ ಹಾಗೂ ಆರ್ಥಿಕ ದೃಷ್ಟಿಯಿಂದ ಸುಸ್ಥಿರ ರೀತಿಯಲ್ಲಿ ಎನ್.ಹೆಚ್ 75 ನ್ನು ಚತುಷ್ಪಥವಾಗಲಿದೆ.

ಇನ್ನು ಕೇಂದ್ರದ ಈ ನಿರ್ಧಾರವನ್ನು ಸಿಎಂ ಬೊಮ್ಮಾಯಿ ಅಭಿನಂದಿಸಿದ್ದಾರೆ. ಶಿರಾಡಿ ಘಾಟ್ ರಸ್ತೆ ರಾಜ್ಯದ ಜೀವನಾಡಿ ಇದ್ದಂತೆ. ಈಗಿರುವ ರಸ್ತೆ ಕಿರಿದಾಗಿದೆ. ಇದನ್ನು ನಾಲ್ಕು ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಲು ಮುಂದಾಗಿರುವ ಕೇಂದ್ರ ಹೆದ್ದಾರಿ ಖಾತೆ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಅಭಿನಂದನೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Edited By : Vijay Kumar
PublicNext

PublicNext

21/01/2022 09:13 am

Cinque Terre

30.22 K

Cinque Terre

1

ಸಂಬಂಧಿತ ಸುದ್ದಿ