ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಂಗಾರತಿ ತರ ತುಂಗಾರತಿ-30 ಕೋಟಿ ರೂ ವೆಚ್ಚದ ಕಾಮಗಾರಿಗೆ ನಾಳೆ ಸಿಎಂ ಚಾಲನೆ

ದಾವಣಗೆರೆ: ಕಾಶಿಯಲ್ಲಿ ನಡೆಯುವ ಗಂಗಾರತಿ ಮಾದರಿಯಲ್ಲಿ ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದಲ್ಲಿ ಹರಿದು ಹೋಗುವ ತುಂಗಾಭದ್ರಾ ನದಿಯಲ್ಲಿ ಆರತಿ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ.

ಈ ಸಂಬಂಧ 30 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ಫೆಬ್ರವರಿ 20ರ ನಾಳೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದಾರೆ. ಪಂಚಮಸಾಲಿ ಲಿಂಗಾಯತ ಸಮಾಜದ ಹರಿಹರ ಕ್ಷೇತ್ರದ ಪೀಠಾಧಿಪತಿ ವಚನಾನಂದ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಈ ಸಮಾರಂಭದಲ್ಲಿ ಗಣ್ಯಾತಿಗಣ್ಯರು ಪಾಲ್ಗೊಳ್ಳಲಿದ್ದಾರೆ.

ಸ್ವಚ್ಛತಾ ಕಾರ್ಯ:

ಹರಿಹರ ಪಟ್ಟಣದಲ್ಲಿ ಹಾದು ಹೋಗುವ ತುಂಗಾಭದ್ರಾ ನದಿ ತೀರದಲ್ಲಿ ಸ್ವಚ್ಛತಾ ಕಾರ್ಯವನ್ನು ವಚನಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಮಾಡಲಾಯಿತು. ಸಂಸದ ಜಿ. ಎಂ.ಸಿದ್ದೇಶ್ವರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ತುಂಗಾಭದ್ರಾ ನದಿಯಲ್ಲಿ ಬೇಕಾಬಿಟ್ಟಿಯಾಗಿ ತ್ಯಾಜ್ಯ ಎಸೆಯುವುದರಿಂದ ಮಲಿನಗೊಂಡಿದೆ.

ಈ ಹಿನ್ನೆಲೆಯಲ್ಲಿ ಕಸ ಸೇರಿದಂತೆ ತ್ಯಾಜ್ಯ ತೆಗೆಯುವ ಕಾರ್ಯವನ್ನು ನೆರವೇರಿಸಲಾಯಿತು. ಪ್ರತಿ ಭಾನುವಾರವೂ ಸಹ ಈ ಕಾರ್ಯಕ್ರಮ ನಡೆಯುತ್ತದೆ. ಇಂದೂ ಸಹ ಬೆಳಿಗ್ಗೆಯಿಂದಲೇ ನೆರವೇರಿಸಲಾಯಿತು. ಈ ವೇಳೆ ಮಾತನಾಡಿದ ಸಂಸದ ಸಿದ್ದೇಶ್ವರ್, ಶ್ರೀಗಳ ಕಾರ್ಯ ನಿಜಕ್ಕೂ ಶ್ಲಾಘನೀಯವಾದದ್ದು. ಮಲಿನಗೊಳ್ಳುವ ನದಿ ಸಂರಕ್ಷಣೆಗೆ ಮುಂದಾಗಿರುವುದು ಅತ್ಯುತ್ತಮ ಕಾರ್ಯ ಎಂದು ಬಣ್ಣಿಸಿದರು.

Edited By : Shivu K
PublicNext

PublicNext

19/02/2022 05:04 pm

Cinque Terre

110.88 K

Cinque Terre

5

ಸಂಬಂಧಿತ ಸುದ್ದಿ