ಹಾವೇರಿ: ಜಿಲ್ಲೆಯಾದ್ಯಂತ ವರುಣನ ಅಬ್ಬರ ಜೋರಾಗಿದ್ದು ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಮನೆಗಳಿಗೆ ಹಾನಿಯುಂಟಾಗಿದೆ.
ಹಾನಗಲ್ ತಾಲೂಕಿನ ಶ್ಯಾಡಗುಪ್ಪಿ ಗ್ರಾಮದಲ್ಲಿ ಕುಮಾರಯ್ಯ ಹಿರೇಮಠ್ ಎಂಬುವರಿಗೆ ಸೇರಿದ ಮನೆ ನೆಲಕಚ್ಚಿದೆ. ಮನೆ ಕಳೆದುಕೊಂಡ ಕುಟುಂಬಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ ಯಾವುದೇ ಪ್ರಾಣಹಾನಿಯಾಗಿಲ್ಲ. ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.
PublicNext
17/07/2022 10:02 pm