ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಜನತಾ ಪ್ಲಾಟಿನ ಜನರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಎಂದು ಕರವೇ ಮನವಿ

ಗದಗ: ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಜನತಾ ಪ್ಲಾಟನ ಜನ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಹೀಗಾಗಿ ಮೂಲ ಸೌಲಭ್ಯಗಳನ್ನು ಒದಗಿಸಿಕೊಡಿ ಎಂದು ಕರ್ನಾಟಕ ರಕ್ಷಣಾ ವೇದಿಕೆ ಗಜೇಂದ್ರಗಡ ನಗರ ಘಟಕದ ವತಿಯಿಂದ ಪ್ರತಿಭಟನೆ ಮಾಡಿ ತಹಸಿಲ್ದಾರ್ ಮತ್ತು ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಜನತಾ ಪ್ಲಾಟಿನಲ್ಲಿ ಮೂಲಭೂತ ಸೌಲಭ್ಯಗಳಾದ ನೀರು ವಿದ್ಯುತ್ ಗಟಾರ ರಸ್ತೆಗಳು ಚರಂಡಿ ಇತರೆ ಮೂಲಭೂತ ಸೌಲಭ್ಯಗಳಿಂದ ಪ್ಲಾಟಿನ ನಿವಾಸಿಗಳು ವಂಚಿತರಾಗಿದ್ದು ಹಲವಾರು ವರ್ಷಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ ಹಲವಾರು ಬಾರಿ ಮನವಿ ಸಲ್ಲಿಸಿದರು ಪ್ರಯೋಜನೆ ಆಗಿಲ್ಲ ಆದರಿಂದ ಇನ್ನೂ 15 ದಿನಗಳ ಒಳಗಾಗಿ ಆ ವಂಚಿತರಿಗೆ ಮೂಲಭೂತ ಸೌಲಭ್ಯ ಒದಗಿಸಬೇಕು ಎಂದು ಮನವಿಯಲ್ಲಿ ಹೇಳಲಾಗಿದೆ.

Edited By :
PublicNext

PublicNext

21/07/2022 04:25 pm

Cinque Terre

123.86 K

Cinque Terre

0

ಸಂಬಂಧಿತ ಸುದ್ದಿ