ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು : ಕೊಚ್ಚಿ ಹೋದ ಸೇತುವೆ; ರೊಚ್ಚಿಗೆದ್ದ ಗ್ರಾಮಸ್ಥರಿಂದ ಪ್ರತಿಭಟನೆ

ಮಧುಗಿರಿ: ತಾಲೂಕಿನ ಮಿಡಿಗೇಶಿ ಹೋಬಳಿ ಲಕ್ಲಿಹಟ್ಟಿ ಗ್ರಾಮದ ಸಂಪರ್ಕ ರಸ್ತೆ ಸೇತುವೆ ಇಂದು ಮಳೆನೀರಿಗೆ ಕೊಚ್ಚಿ ಹೋಗಿದ್ದು, ಗ್ರಾಮಕ್ಕೆ ಸಂಪರ್ಕವೇ ಇಲ್ಲದಂತಾಗಿದೆ!

ಹಲವು ಬಾರಿ ಈ ಸೇತುವೆಯನ್ನು ಸರಿಪಡಿಸುವಂತೆ ಮನವಿ ಮಾಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಜನಪ್ರತಿನಿಧಿಗಳು ಮತ್ತು ತಾಲೂಕು ಆಡಳಿತ ವಿರುದ್ಧ ಗ್ರಾಮಸ್ಥರು ಹರಿಹಾಯ್ದರು.

ಪಾವಗಡ- ತುಮಕೂರು ಮುಖ್ಯರಸ್ತೆಯನ್ನು ಮಿಡಿಗೇಶಿ ಬಳಿ ಕೆಲವು ಗಂಟೆಗೆ ತಡೆದು ಗ್ರಾಮಸ್ಥರು ಪ್ರತಿಭಟಿಸಿದರು. ತಹಶೀಲ್ದಾರ್ ಸುರೇಶ ಆಚಾರ್ ಮತ್ತು ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜಕುಮಾರ್, ಗ್ರಾಮಸ್ಥರಾದ ಸಿದ್ದಪ್ಪ, ಚಂದ್ರಣ್ಣ, ನಿಜಲಿಂಗಪ್ಪ, ಪವನ್, ನವೀನ್, ಸಿದ್ದರಾಜು ಮತ್ತಿತರರು ಇದ್ದರು.

ವರದಿ: ರಾಘವೇಂದ್ರ ದಾಸರಹಳ್ಳಿ, ಪಬ್ಲಿಕ್ ನೆಕ್ಸ್ಟ್

Edited By : Manjunath H D
PublicNext

PublicNext

05/08/2022 10:27 pm

Cinque Terre

55.01 K

Cinque Terre

0

ಸಂಬಂಧಿತ ಸುದ್ದಿ