ಉತ್ತರಕನ್ನಡ: ಶಾಲಾ ವೇಳೆಯ ನಂತರ ಹಳ್ಳಿಗಳಿಗೆ ತೆರಳಲು ಸರಿಯಾದ ಬಸ್ ವ್ಯವಸ್ಥೆಗಳಿಲ್ಲದ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ದಿಢೀರ್ ರಸ್ತೆ ತಡೆ ನಡೆಸಿದ ಘಟನೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡಿನ ಕಾತೂರಿನ ಬಳಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಕಾತೂರ್ ಸುತ್ತಮುತ್ತ ಸಾಕಷ್ಟು ಒಳ ಹಳ್ಳಿಗಳಿದ್ದು ನೂರಾರು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಶಾಲೆ ಬಿಟ್ಟ ಬಳಿಕ ಮನೆಗಳಿಗೆ ತೆರಳಲು ತೊಂದರೆಯಾಗುತ್ತಿತ್ತು.
ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಂಜೆ ಸುಮಾರು ಎರಡು ತಾಸುಗಳ ಕಾಲ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು.
ತಹಶೀಲ್ದಾರರು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆಗೆ ಪರಿಹಾರ ನೀಡಬೇಕೆಂದು ವಿದ್ಯಾರ್ಥಿಗಳು ಪಟ್ಟುಹಿಡಿದ್ರು.ಇದರಿಂದಾಗಿ ಕೆಲಕಾಲ ರಸ್ತೆ ಸಂಚಾರದಲ್ಲಿ ವ್ಯತ್ಯಯವಾಗಿತ್ತು.
PublicNext
24/08/2022 10:44 pm