ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ರಸ್ತೆ ಇಲ್ಲದೆ ಪರಿತಪಿಸುತ್ತಿರುವ ಗ್ರಾಮಸ್ಥರು: ಪಬ್ಲಿಕ್ ನೆಕ್ಸ್ಟ್ ವರದಿಗೆ ಬಿಗ್‌ ಇಂಪ್ಯಾಕ್ಟ್

ಕೊರಟಗೆರೆ: 'ಗ್ರಾಮಕ್ಕಿಲ್ಲ ರಸ್ತೆ: ಹೇಳತೀರದು ಜನರ ಅವಸ್ಥೆ' ಎಂಬ ತಲೆ ಬರಹದ ಅಡಿಯಲ್ಲಿ ನಿಮ್ಮ ಪಬ್ಲಿಕ್ ನೆಕ್ಸ್ಟ್‌ನಲ್ಲಿ ಮಂಗಳವಾರ ಪ್ರಸಾರವಾದ ವರದಿಯಿಂದ ಕೊರಟಗೆರೆ ತಾಲೂಕು ಆಡಳಿತ ಎಚ್ಚೆತ್ತುಕೊಂಡಿದೆ. ಕೆಲವೇ ಗಂಟೆಗಳಲ್ಲಿ ಕೊರಟಗೆರೆ ತಾಲೂಕಿನ ಕುಮಟೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ತಹಶೀಲ್ದಾರ್ ನಹೀದಾ ಜಂ ಜಂ ಮತ್ತು ಕಂದಾಯ ಅಧಿಕಾರಿಗಳ ನೇತೃತ್ವದ ತಂಡ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ಸೂಕ್ತ ರಸ್ತೆಯನ್ನು ಕಲ್ಪಿಸುವ ಭರವಸೆ ನೀಡಿದ್ದಾರೆ.

ಗ್ರಾಮದ ನಕಾಶೆ ರಸ್ತೆ ತೆರವು ಕಾರ್ಯಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಮುಂದಾಗಿದ್ದು ಸಿದ್ಧರಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಮಟೇನಹಳ್ಳಿ ಗ್ರಾಮವು ಕಂದಾಯ ಗ್ರಾಮಕ್ಕೆ ಒಳಪಟ್ಟಿದ್ದು ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ಇದನ್ನು ಕಲ್ಪಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆ ಮುಂದಾಗಿದ್ದು ಸಾರ್ವಜನಿಕ ವಲಯದಲ್ಲಿ ತಹಶೀಲ್ದಾರ್ ಶೀಘ್ರ ಸ್ಪಂದನೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು. ಕೊರಟಗೆರೆ ತಾಲೂಕಿನ ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು ನಿದ್ರೆಯಿಂದ ಇನ್ನು ಎದ್ದಿಲ್ಲ. ಈ ಕುಗ್ರಾಮಕ್ಕೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಜೊತೆಗೆ ಮುಖ್ಯವಾಗಿ ಅಭಿವೃದ್ದಿ ಕಾರ್ಯ ಯಾರು ಮುಂದಾಗದಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಪಬ್ಲಿಕ್ ನೆಕ್ಸ್ಟ್ ವರದಿಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಭೇಟಿ ಸಂದರ್ಭದಲ್ಲಿ ಕಂದಾಯ ಅಧಿಕಾರಿ ಅಮ್ಜದ್, ಗ್ರಾಮ ಸಹಾಯಕರು, ಗ್ರಾಮಸ್ಥರು ಉಪಸ್ಥಿತರಿದ್ದರು.

-ರಾಘವೇಂದ್ರ ದಾಸರಹಳ್ಳಿ,ಪಬ್ಲಿಕ್ ನೆಕ್ಸ್ಟ್,ತುಮಕೂರು.

Edited By : Shivu K
PublicNext

PublicNext

01/09/2022 11:35 am

Cinque Terre

54.62 K

Cinque Terre

0

ಸಂಬಂಧಿತ ಸುದ್ದಿ