ಬೆಂಗಳೂರು : ಯಡಿಯೂರು ಕೆರೆಯ ಕಲ್ಯಾಣಿಯ ಸ್ವಚ್ಛತಾ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸೆ.5 ರಿಂದ 12 ರವರೆಗೆ ಗಣೇಶ್ ಮೂರ್ತಿ ವಿಸರ್ಜನೆ ಅವಕಾಶವಿರುವುದಿಲ್ಲ ಎಂದು ಸಹಾಯಕ ಕಾರ್ಯಪಾಲಕ ಅಭಿಯಂತರ ಯತೀಶ್ ತಿಳಿಸಿದ್ದಾರೆ.
ಪಾಲಿಕೆಯ ದಕ್ಷಿಣ ವಲಯ ವಾರ್ಡ್ ಸಂಖ್ಯೆ 167 ಯಡಿಯೂರು ಕೆರೆಯ ಕಲ್ಯಾಣಿಯಲ್ಲಿ ಗಣೇಶ ವಿಸರ್ಜನಾ ಕಾರ್ಯಕ್ರಮವನ್ನು ಪ್ರತಿ ವರ್ಷದಂತೆ ಈ ವರ್ಷವೂ ಸಕಲ ಸಿದ್ಧತೆಯೊಂದಿಗೆ ಮಾಡಿಕೊಳ್ಳಲಾಗಿತ್ತು.
ಆ. 31 ರಿಂದ 15 ರವರೆಗೆ ಸಾರ್ವಜನಿಕರು ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಲಾಗಿತು.ಈಗ ಯಡಿಯೂರು ಕೆರೆ ಕಲ್ಯಾಣಿಯಲ್ಲಿ ಸಾಕಷ್ಟು ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಿರುವುದರಿಂದ ಈಗಾಗಲೇ ಕಲ್ಯಾಣಿಯು ಬಹುಪಾಲು ಭಾಗವು ತುಂಬಿದ್ದು, ಗಣೇಶ ಮೂರ್ತಿ ವಿಸರ್ಜನೆಗೆ ಸ್ಥಳಾವಕಾಶ ಇಲ್ಲದಿರುವುದರಿಂದ ವಿಸರ್ಜನಾ ಕೊಳದಲ್ಲಿ ತುಂಬಿರುವ ಮಣ್ಣು ಮತ್ತು ಇತರೆ ಗಣೇಶ ಮೂರ್ತಿಗಳ ತ್ಯಾಜ್ಯಗಳನ್ನು ವಿಲೇವಾರಿ ಮಾಡಿ ಹೊಸದಾಗಿ ನೀರು ತುಂಬಿಸಿ ಸಾರ್ವಜನಿಕರಿಗೆ ಗಣೇಶ ಮೂರ್ತಿ ವಿಸರ್ಜನಾ ಕಾರ್ಯಕ್ಕೆ ಅವಕಾಶ ಕಲ್ಪಿಸಲಾಗಿದೆ.
ಈ ಕಾರಣ ಸೆ.5 ರಿಂದ 12 ರವರೆಗೆ ಗಣೇಶ ಮೂರ್ತಿಗಳ ವಿಸರ್ಜನೆಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದ್ದಾರೆ.
PublicNext
02/09/2022 01:08 pm