ಕಾರವಾರ: ಅರಣ್ಯ ವಾಸಿಗಳ ಸಮಸ್ಯೆಗಳ ಕುರಿತು ಮುಂಬರುವ ಮಳೆಗಾಲದ ವಿಧಾನಸಭಾ ಅಧಿವೇಶನದಲ್ಲಿ ಪೂರ್ಣ ಪ್ರಮಾಣದ ಚರ್ಚೆ ನಡೆಯಬೇಕು.ಈ ಮೂಲಕ ಅರಣ್ಯವಾಸಿಗಳ ಪರವಾದ ನಿಲುವನ್ನ ರಾಜ್ಯ ಸರಕಾರ ತೆಗೆದುಕೊಳ್ಳಬೇಕೆಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಒತ್ತಾಯಿಸಲು ತೀರ್ಮಾನಿಸಿರುವುದಾಗಿ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.
ಅವರು ಶಿರಸಿಯಲ್ಲಿನ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಕಾರ್ಯಾಲಯದಲ್ಲಿ ಮುಖ್ಯಮಂತ್ರಿಗೆ ಬರೆದ ಪತ್ರವನ್ನ ಬಿಡುಗಡೆಗೊಳಿಸಿ ಮಾತನಾಡಿ, ಸುಪ್ರೀಂ ಕೋರ್ಟ್‌ನಲ್ಲಿ ಈಗಾಗಲೇ ಅರಣ್ಯ ಭೂಮಿ ಹಕ್ಕು ಕಾಯಿದೆ ಅಡಿಯಲ್ಲಿ ತಿರಸ್ಕಾರವಾಗಿರುವ ಅತಿಕ್ರಮಣದಾರರನ್ನ ಒಕ್ಕಲೆಬ್ಬಿಸಬೇಕೆಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಅಂತಿಮ ವಿಚಾರಣೆ ಜರುಗುತ್ತಿರುವುದರಿಂದ ರಾಜ್ಯ ಸರಕಾರವು ಸ್ಪಷ್ಟವಾದ ಅರಣ್ಯವಾಸಿಗಳ ಪರ ನಿಲುವನ್ನ ವಿಧಾನಸಭೆಯ ಅಧಿವೇಶನದಲ್ಲಿ ನಿರ್ಣಯಿಸಬೇಕೆಂದು ಅವರು ಆಗ್ರಹಿಸಿದರು.
PublicNext
07/09/2022 12:00 pm