ಬೆಂಗಳೂರು: ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲು ಒಂದು ಕಡೆ ಬಿಜೆಪಿಯ ಜನಸಂಕಲ್ಪಯಾತ್ರೆಯಲ್ಲಿ ಸಿಎಂ ಬೊಮ್ಮಾಯಿ , ಮಾಜಿ ಸಿಎಂ ಯಡಿಯೂರಪ್ಪ ನವರು ಸಿದ್ದರಾಮಯ್ಯನವರ ವಿರುದ್ಧ ಘರ್ಜಿಸಿದ ಬೆನ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ಆರೋಪದಡಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ..
•ಅಧಿಕಾರ ದುರುಪಯೋಗ, ಭ್ರಷ್ಟಾಚಾರ, ವಂಚನೆ ಮತ್ತು ಸರ್ಕಾರಿ ಭೂ ಕಬಳಿಕೆ ಸಂಚು ಪ್ರಕರಣದಡಿ ದೂರು ದಾಖಲಿಸಿದ ಬೆಂಗಳೂರು ದಕ್ಷಿಣ ಜಿಲ್ಲೆ ಬಿಜೆಪಿ ಅಧ್ತಕ್ಷ N. R. ರಮೇಶ್..
•ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಹಲವರು ಹಗರಣದಲ್ಲಿ ಭಾಗಿ ಯಾಗಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲು..
ಪ್ರಭಾವೀ ಬಿಲ್ಡರ್ ಒಬ್ಬರ ಹಣದ ಪ್ರಭಾವಕ್ಕೆ ಒಳಗಾಗಿ ಕಾನೂನು ಬಾಹಿರವಾಗಿ ಸರ್ಕಾರೀ ಸ್ವತ್ತನ್ನು “Re - Do” ಎಂಬ ಹೆಸರಿನಲ್ಲಿ “De - notification” ಮಾಡಿರುವ ಗಂಭೀರ ಆರೋಪ.
ಬೆಂಗಳೂರು ದಕ್ಷಿಣ ತಾಲ್ಲೂಕು, ಕಸಬಾ ಹೋಬಳಿಯ ಲಾಲ್ ಬಾಗ್ ಸಿದ್ಧಾಪುರ ಗ್ರಾಮದ (ಈಗಿನ ಜಯನಗರ 1ನೇ ಬ್ಲಾಕ್) ಸರ್ವೆ ನಂಬರ್ - 27/1, 28/4, 28/5 ಮತ್ತು 28/6 ರ 02 ಎಕರೆ 39 ½ ಗುಂಟೆಯಷ್ಟು ವಿಸ್ತೀರ್ಣದ ಸುಮಾರು 200 ಕೋಟಿ ರೂ. ಗಳಿಗೂ. ಹೆಚ್ಚು ಮೌಲ್ಯದ ಸರ್ಕಾರಿ ಸ್ವತ್ತು
ಈ ಸ್ವತ್ತನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ Master Plan ನಂತೆ “ಉದ್ಯಾನವನ ಮತ್ತು ಸಾರ್ವಜನಿಕ ಬಳಕೆಯ ಜಾಗ” ವೆಂದು ಮೀಸಲಿಡಲಾಗಿತ್ತು..ಈ ಜಾಗವನ್ನು ಡಿ ನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲು....
ಈ ಕುರಿತು ಎನ್ ಆರ್ ರಮೇಶ್ ಅವರ ಜೊತೆ ನಮ್ಮ ಪ್ರತಿನಿಧಿ ಪ್ರವೀಣ್ ರಾವ್ ನಡೆಸಿರುವ ಚಿಟ್ ಚಾಟ್ ಇಲ್ಲಿದೆ
PublicNext
12/10/2022 08:46 pm