ಪೇಶಾವರ : ಪಾಕಿಸ್ತಾನದ ಪೇಶಾವರದ ಮದರಸಾದ ಮೇಲೆ ಇಂದು ಬಾಂಬ್ ದಾಳಿ ನಡೆದಿದೆ. ದಾಳಿಯಲ್ಲಿ 7 ಜನ ಮಕ್ಕಳು ಸಾವನಪ್ಪಿದ್ದು ಹಲವರ ಸ್ಥಿತಿ ಗಂಭೀರವಾಗಿದೆ.
ಧರ್ಮಗುರು ಇಸ್ಲಾಂ ಧರ್ಮದ ಬೋಧನೆಗಳ ಕುರಿತು ಉಪನ್ಯಾಸ ನೀಡುತ್ತಿರುವಾಗ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿ ವಾಕರ್ ಅಜೀಮ್ ತಿಳಿಸಿದ್ದಾರೆ.
ಪ್ಲಾಸ್ಟಿಕ್ ಚೀಲದಲ್ಲಿ ಬಾಂಬ್ ಇಟ್ಟು ಹೋದ ಕೆಲವೇ ಕ್ಷಣದಲ್ಲಿ ಅದು ಸ್ಫೋಟಗೊಂಡಿದೆ.
ಮಕ್ಕಳೂ ಸೇರಿ 70ಕ್ಕೂ ಅಧಿಕ ಗಂಭೀರವಾಗಿ ಗಾಯಗೊಂಡಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗಬಹುದೆಂದು ವೈದ್ಯರು ಹೇಳಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಈ ಪ್ರಾಂತ್ಯದಲ್ಲಿ ಉಗ್ರಗಾಮಿಗಳ ಕುಕೃತ್ಯ ಹೆಚ್ಚಾಗಿ ನಡೆಯುತ್ತಿದೆ.
PublicNext
27/10/2020 11:57 am