ಜಕಾರ್ತ: ಇಂಡೋನೇಷ್ಯಾದ ಬಾಂಟೆನ್ ಪ್ರಾಂತ್ಯದ ಜೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 41 ಜನರು ಸಜೀವ ದಹನಗೊಂಡಿದ್ದಾರೆ. ಜೊತೆಗೆ 39 ಜನರು ಗಾಯಗೊಂಡಿದ್ದಾರೆ.
ಮಾದಕ ದ್ರವ್ಯ ಅಪರಾಧಿಗಳಿಗಾಗಿ ಇರುವ ಜಕಾರ್ತದ ಹೊರವಲಯದಲ್ಲಿರುವ ತಂಗೇರಂಗ್ ಜೈಲಿನ ಬ್ಲಾಕ್ ಸಿ ಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಆದರೆ ಬೆಂಕಿ ಅವಘಡಕ್ಕೆ ಕಾರಣವೇನು ಎನ್ನುವುದು ತಿಳಿದು ಬಂದಿಲ್ಲ. ಈ ಸಂಬಂಧ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ ಎಂದು ಜೈಲು ಇಲಾಖೆಯ ವಕ್ತಾರ ರಿಕಾ ಅಪ್ರಿಯಂತಿ ತಿಳಿಸಿದ್ದಾರೆ.
1,225 ಕೈದಿಗಳನ್ನು ಇಡುವಷ್ಟು ಸಾಮರ್ಥ್ಯವಿರುವ ತಂಗೇರಂಗ ಜೈಲಿನಲ್ಲಿ 2,000ಕ್ಕಿಂತಲೂ ಹೆಚ್ಚು ಜನರಿದ್ದಾರೆ. ಬೆಂಕಿ ಸಂಭವಿಸಿದಾಗ ಬ್ಲಾಕ್ ಸಿನಲ್ಲಿ 122 ಅಪರಾಧಿಗಳಿದ್ದರು. ಬೆಂಕಿ ನಿಯಂತ್ರಿಸಲು ನೂರಾರು ಪೋಲಿಸರು ಮತ್ತು ಸೈನಿಕರನ್ನು ನಿಯೋಜಿಸಲಾಗಿದೆ ಎಂದು ಅಪ್ರಿಯಂತಿ ತಿಳಿಸಿದ್ದಾರೆ.
PublicNext
08/09/2021 11:43 am