ಇಸ್ಲಾಮಾಬಾದ್: ತೈಲ್ ಟ್ಯಾಂಕರ್ ಹಾಗೂ ಬಸ್ ನಡುವೆ ಡಿಕ್ಕಿ ಸಂಭವಿಸಿ 20 ಜನ ಸ್ಥಳದಲ್ಲೇ ಸಜೀವ ದಹನವಾದ ಭೀಕರ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ.
ಲಾಹೋರ್‌ನಿಂದ 350 ಕಿ.ಮೀ ದೂರ ಇರುವ ಮುಲ್ತಾನ್–ಸುಕ್ಕೂರ್ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ಈ ದುರ್ಘಟನೆ ನಡೆದಿದೆ. ಟ್ರಕ್ ಕರಾಚಿಯಿಂದ ಲಾಹೋರ್‌ಗೆ ತೆರಳುತಿತ್ತು. ಬಸ್ ಲಾಹೋರ್‌ನಿಂದ ಮುಲ್ತಾನ್ ನಗರಕ್ಕೆ ಹೊರಟಿತ್ತು. ಬಸ್ ಚಾಲಕನ ನಿರ್ಲಕ್ಷ್ಯ ಹಾಗೂ ಅತಿ ವೇಗವೇ ಈ ಘಟನೆಗೆ ಕಾರಣ ಎಂದು ತಿಳಿದು ಬಂದಿದೆ.
ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಆದರೆ ಬೆಂಕಿಯ ತೀವ್ರತೆಯಿಂದಾಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ 20 ಜನ ಸುಟ್ಟು ಕರಕಲಾಗಿದ್ದು, ಗುರುತು ಹಿಡಿಯಲು ಸಾಧ್ಯ ಆಗುತ್ತಿಲ್ಲ. ಡಿಎನ್‌ಎ ವರದಿ ನಂತರ ಶವಗಳನ್ನು ಕುಟುಂಬಗಳಿಗೆ ಹಸ್ತಾಂತರ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
PublicNext
16/08/2022 01:35 pm