ಕೀವ್: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಮಧ್ಯೆ ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್ ಸ್ಕಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಇಂದು ಸಂಭವಿಸಿದೆ.ರಷ್ಯಾ ದಾಳಿಯಿಂದ ಉಕ್ರೇನ್ ಗೆ ಅಪಾರ ಪ್ರಮಾಣದ ಹಾನಿ ಅನುಭವಿಸಿದ್ದರೂ ಅಧ್ಯಕ್ಷ ವೊಲೊದಿಮಿರ್ ಝೆಲೆನ್ ಸ್ಕಿ ಮಾತ್ರ ಧೈರ್ಯದಿಂದ ಮುನ್ನುಗ್ಗುತ್ತಲೇ ಇದ್ದಾರೆ.
ಇದರ ನಡುವೆಯೇ ಉಕ್ರೇನ್ ಅಧ್ಯಕ್ಷರು ಪ್ರಯಾಣಿಸುತ್ತಿದ್ದ ಕಾರು ಮತ್ತೊಂದು ಕಾರು ಡಿಕ್ಕಿ ಹೊಡೆದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅದೃಷ್ಟವಶಾತ್ ವೊಲೊದಿಮಿರ್ ಅಲ್ಪದಲ್ಲಿಯೇ ಪಾರಾಗಿದ್ದಾರೆ. ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.ಇನ್ನು ಇವರ ಕಾರು ಚಾಲಕನಿಗೆ ಸಹ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಕೂಲಂಕಷವಾಗಿ ತನಿಖೆ ಪ್ರಾರಂಭಿಸಿದ್ದಾರೆ.
PublicNext
15/09/2022 01:11 pm