ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಾಕ್ ಮತ್ತೊಂದು ಹೇಯ ಕೃತ್ಯ : 600 ಹಿಂದೂ ಕುಟುಂಬಗಳ ಮೇಲೆ ದಾಳಿಗೆ ಯತ್ನ

ನವದೆಹಲಿ: ಪಾಕಿಸ್ತಾನದ ಸಿಂಧ್ ಪ್ರದೇಶದಲ್ಲಿ ದೇವಸ್ಥಾನ ಧ್ವಂಸಗೊಳಿಸಿದ್ದು ಮಾತ್ರವಲ್ಲದೆ 300ಕ್ಕೂ ಹೆಚ್ಚು ಹಿಂದೂ ಕುಟುಂಬಗಳ ಮೇಲೆ ದಾಳಿಗೆ ಯತ್ನಿಸಿದ್ದಾರೆ.

ಶೀತಲ್ ದಾಸ್ ಕಾಂಪೌಂಡ್ ನಲ್ಲಿ ಭಾನುವಾರ ಘಟನೆ ನಡೆದಿದ್ದು, 300ಕ್ಕೂ ಹೆಚ್ಚು ಹಿಂದೂ ಹಾಗೂ 30 ಮುಸ್ಲಿಂ ಕುಟುಂಬಗಳು ವಾಸಿಸುತ್ತಿವೆ.

ಇಲ್ಲಿನ ನಿವಾಸಿಗಳ ಪ್ರಕಾರ, ಹಿಂದೂ ಕುಟುಂಬಗಳ ಮೇಲೆ ದಾಳಿ ಮಾಡುವ ಉದ್ದೇಶದಿಂದ ನೂರಾರು ಮಂದಿ ಕಾಂಪೌಂಡ್ ಬಳಿ ಜಮಾಯಿಸಿದ್ದರು ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕಾಂಪೌಂಡ್ ಆಸುಪಾಸಿನಲ್ಲಿರುವ ಮುಸ್ಲಿಂ ಕುಟುಂಬದವರು ತಕ್ಷಣವೇ ಆಗಮಿಸಿ ಗೇಟ್ ಬಳಿ ಬಂದು ಗುಂಪನ್ನು ತಡೆದಿದ್ದಾರೆ.

ಘಟನೆ ಬಗ್ಗೆ ಮಾಹಿತಿ ನೀಡುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿದರು ಎಂದು ತಿಳಿದು ಬಂದಿದೆ.

ಅಲ್ಲದೆ ಮುಸ್ಲಿಂ ಗುಂಪೊಂದು ಹಿಂಗೂ ಕುಟುಂಬಗಳು ವಾಸವಿರುವ ಕಾಂಪೌಂಡ್ ಮೇಲೆ ದಾಳಿ ನಡೆಸಲು ಮುಂದಾಗಿತ್ತು.

ಪೊಲೀಸರು ಅದನ್ನು ತಡೆದರು. ದೇವಸ್ಥಾನದಲ್ಲಿ ಮೂರು ವಿಗ್ರಹಗಳನ್ನು ನಾಶ ಮಾಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಹಿಂದೂ ಸಮುದಾಯದವರ ಮೇಲೆ ಅಲ್ಲಿನ ಸ್ಥಳೀಯ ಮುಸ್ಲಿಂ ಗುಂಪು ದಾಳಿ ನಡೆಸಲು ಮುಂದಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪಾಕಿಸ್ತಾನದಲ್ಲಿನ 22 ಕೋಟಿ ಜನ ಸಂಖ್ಯೆ ಪೈಕಿ ಮುಸ್ಲಿಮರು ಬಹುಸಂಖ್ಯಾತರಾಗಿದ್ದು, ಹಿಂದೂಗಳು ಕೇವಲ ಶೇ.2ರಷ್ಟು ಇದ್ದಾರೆ.

ಇದರಲ್ಲಿ ಬಹುತೇಕರು ಸಿಂಧ್ ಪ್ರಾಂತ್ಯದಲ್ಲೇ ಜೀವನ ಕಟ್ಟಿಕೊಂಡಿದ್ದಾರೆ.

ಸಿಂಧ್ ನಲ್ಲಿ ಹಿಂದೂ ದೇವಸ್ಥಾನಗಳ ಮೇಲೆ ನಡೆಯುತ್ತಿರುವ ಮೂರನೇ ದಾಳಿ ಇದಾಗಿದೆ.

Edited By : Nirmala Aralikatti
PublicNext

PublicNext

05/11/2020 01:33 pm

Cinque Terre

29.66 K

Cinque Terre

2

ಸಂಬಂಧಿತ ಸುದ್ದಿ