ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚೀನಾದಲ್ಲಿ ಕಲ್ಲಿದ್ದಲು ಗಣಿ ದುರಂತ- 16 ಮಂದಿ ಕಾರ್ಮಿಕರು ಸಾವು

ಬೀಜಿಂಗ್: ನೈರುತ್ಯ ಚೀನಾದಲ್ಲಿ ಕಲ್ಲಿದ್ದಲು ಗಣಿಗಾರಿಕೆ ವೇಳೆ ದುರಂತ ಸಂಭವಿಸಿ ಸುಮಾರು 16 ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಚೀನಾದ ಮಾಧ್ಯಮಗಳು ವರದಿ ಮಾಡಿವೆ.

ಚಾಂಗ್ ಕ್ವಿಂಗ್ ನಗರ ಹೊರ ಪ್ರದೇಶದ ಸಾಂಗ್ ಜೋ ಕಲ್ಲಿದ್ದಲು ಗಣಿಕಾರಿಕೆ ನಿಕ್ಷೇಪದಲ್ಲಿ ಭಾನುವಾರ ಘಟನೆ ಸಂಭವಿಸಿದ್ದು, ಅಪಾಯಕಾರಿ ಹಂತದ ಕಾರ್ಬನ್ ಮೊನಾಕ್ಸೈಡ್ ಬಿಡುಗಡೆಯಾಗಿದೆ. ಈ ವೇಳೆ ಕಲ್ಲಿದ್ದಲು ಗಣಿಯ ತಳಭಾಗದಲ್ಲೇ ಸಿಲುಕಿ ಹಾಕಿಕೊಂಡಿದ್ದ 16 ಕಾರ್ಮಿಕರು ಕಾರ್ಬನ್ ಮಾನಕ್ಸೈಡ್ ವಿಷ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ಚೀನಾ ಸರ್ಕಾರಿ ಅಧೀನದ ಕ್ಸಿನುವಾ ಸುದ್ದಿ ಸಂಸ್ಥೆ ಮಾಹಿತಿ ನೀಡಿದೆ.

ಸಾಂಗ್ ಜೋ ಕಲ್ಲಿದ್ದಲು ಗಣಿ ಚಾಂಗ್ಕಿಂಗ್ ಎನರ್ಜಿ ಎಂಬ ರಾಜ್ಯ ಇಂಧನ ಸಂಸ್ಥೆಗೆ ಸೇರಿದ್ದಾಗಿದೆ. ಕಾರ್ಮಿಕರನ್ನು ರಕ್ಷಿಸುವುದಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಓರ್ವ ಕಾರ್ಮಿಕನ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

Edited By : Vijay Kumar
PublicNext

PublicNext

27/09/2020 06:58 pm

Cinque Terre

168.42 K

Cinque Terre

1

ಸಂಬಂಧಿತ ಸುದ್ದಿ