ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ ಆರೋಪದಡಿ 45 ಮಂದಿಯನ್ನು ಭಾನುವಾರ ಬಂಧಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಒಟ್ಟು 100 ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ ಎಂದು ಪಾಕಿಸ್ತಾನಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ತೆರಿ ಗ್ರಾಮದಲ್ಲಿರುವ ಹಿಂದೂ ದೇವಾಲಯದ ನವೀಕರಣವನ್ನು ವಿರೋಧಿಸಿ ಡಿಸೆಂಬರ್ 30ರಂದು ಧ್ವಂಸಗೊಳಿಸಿ ಬೆಂಕಿ ಹಚ್ಚಲಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಘಟನೆಗೆ ಸಂಬಂಧಿಸಿದಂತೆ ಭಾರತೀಯ ರಾಯಭಾರಿ ಕಚೇರಿಯು ಜನವರಿ 1ರಂದು ಪ್ರತಿಭಟನೆ ವ್ಯಕ್ತಪಡಿಸಿತ್ತು. ಮಾನವ ಹಕ್ಕುಗಳ ಹೋರಾಟಗಾರರು ಘಟನೆಯನ್ನು ಖಂಡಿಸಿದ್ದರು.
ಜಮಿಯತ್ ಉಲೆಮಾ-ಇ-ಇಸ್ಲಾಂ ಪಕ್ಷದ ಸದಸ್ಯರು ಈ ಪ್ರಕರಣದಲ್ಲಿ ಭಾಗಿಯಾಗಿದ್ದು, 300ಕ್ಕೂ ಅಧಿಕ ಜನರ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.
PublicNext
03/01/2021 05:45 pm