ಬೀಜಿಂಗ್: ಎರಡು ತಿಂಗಳ ಹಿಂದಷ್ಟೇ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನೇತೃತ್ವದ ಸರ್ಕಾರದ ನೀತಿಯನ್ನು ಟೀಕಿಸಿದ್ದ ಆಲಿಬಾಬಾ ಸಂಸ್ಥಾಪಕ, ಶತಕೋಟ್ಯಧಿಪತಿ ಜಾಕ್ ಮಾ ಕಣ್ಮರೆಯಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಭಾರೀ ಚರ್ಚೆ ನಡೆದಿದ್ದು, ಚೀನಾ ಸರ್ಕಾರವು ತನ್ನ ನೀತಿಯನ್ನು ಸಾರ್ವಜನಿಕವಾಗಿ ಟೀಕಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಸಾಮಾನ್ಯ ಪ್ರಕ್ರಿಯೆ. ಅದೇ ರೀತಿಯಾಗಿ ಚೀನಾ ಜಾಕ್ ಮಾ ವಿರುದ್ಧ ಕ್ರಮ ಕೈಗೊಂಡಿರಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಅಕ್ಟೋಬರ್ 24ರಂದು ಶಾಂಘೈನಲ್ಲಿ ಜಾಕ್ ಮಾ ಮಾತನಾಡಿದ್ದ ಜಾಕ್ ಮಾ, ''ಇಂದಿನ ಹಣಕಾಸು ವ್ಯವಸ್ಥೆಯು ಕೈಗಾರಿಕಾ ಯುಗದ ಪರಂಪರೆಯಾಗಿದೆ. ಮುಂದಿನ ಪೀಳಿಗೆ ಮತ್ತು ಯುವಜನರಿಗಾಗಿ ನಾವು ಹೊಸದನ್ನು ಸ್ಥಾಪಿಸಬೇಕು. ನಾವು ಪ್ರಸ್ತುತ ವ್ಯವಸ್ಥೆಯನ್ನು ಸುಧಾರಿಸಬೇಕು'' ಎಂದು ಹೇಳಿದ್ದರು. ಇದರು ಚೀನಾ ಸರ್ಕಾರದ ಕೋಪಕ್ಕೆ ಕಾರಣವಾಗಿತ್ತು.
ಜಾಕ್ ಮಾ ಭಾಷಣ ಚೀನಾದ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ಜನ ಜಾಕ್ ಮಾ ಸುರಕ್ಷತೆಯ ಬಗ್ಗೆ ಆಗಲೇ ಅನುಮಾನ ವ್ಯಕ್ತಪಡಿಸಿ ಪ್ರಶ್ನೆಗಳನ್ನು ಎತ್ತಿದ್ದರು. ಅದಾದ ಬಳಿಕ 'ಅಮೆರಿಕ ಬಿಸಿನೆಸ್ ಹೀರೋ' ಟ್ಯಾಲೆಂಟ್ ಕಾರ್ಯಕ್ರಮವನ್ನು ಜಾಕ್ ಮಾ ಪ್ರಾಯೋಜಿಸಿದ್ದರು. ಈ ಶೋದ ಅಂತಿಮ ಕಾರ್ಯಕ್ರಮದಲ್ಲಿ ಜಾಕ್ ಮಾ ಭಾಗವಹಿಸಬೇಕಿತ್ತು. ಆದರೆ ಈ ಕಾರ್ಯಕ್ರಮದಲ್ಲಿ ಜಾಕ್ ಮಾ ಕಾಣಿಸಿರಲಿಲ್ಲ. ಈ ಎಲ್ಲ ಬೆಳವಣಿಗೆಯಿಂದಾಗಿ ಜಾಕ್ ಮಾ ಕಣ್ಮರೆಯಾಗಿದ್ದಾರಾ ಎಂಬ ಅನುಮಾನ ವ್ಯಕ್ತವಾಗಿದೆ.
PublicNext
04/01/2021 07:48 pm