ಇಸ್ಲಾಮಾಬಾದ್: ಭಾರತ ಕೊಟ್ಟ ತಿರುಗೇಟಿನಿಂದ ಏನು ಆಗಿಲ್ಲ ಎಂದು ಹೇಳುವ ಪಾಕಿಸ್ತಾನ ಈಗ 'ಬಾಲಾಕೋಟ್' ದಾಳಿಯ ಸಾವು ನೋವಿನ ಬಗ್ಗೆ ಕೊನೆಗೂ ಸತ್ಯ ಒಪ್ಪಿಕೊಂಡಿದೆ.
ಹೌದು. 2019ರ ಫೆಬ್ರವರಿ 26ರಂದು ಬಾಲಾಕೋಟ್‌ನ ಉಗ್ರರ ಶಿಬಿರದ ಮೇಲೆ ಭಾರತೀಯ ವಾಯುಪಡೆ ನಡೆಸಿದ್ದ ವೈಮಾನಿಕ ದಾಳಿಯಲ್ಲಿ 300 ಭಯೋತ್ಪಾದಕರು ಮೃತಪಟ್ಟಿದ್ದರು ಎಂದು ಪಾಕಿಸ್ತಾನದ ಮಾಜಿ ರಾಜತಾಂತ್ರಿಕ ಅಧಿಕಾರಿಯೊಬ್ಬರು ಒಪ್ಪಿಕೊಂಡಿದ್ದಾರೆ.
ಪಾಕಿಸ್ತಾನದ ಉರ್ದು ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ಆಘಾ ಹಿಲಾಲಿ, ''ಭಾರತ ಅಂತಾರಾಷ್ಟ್ರೀಯ ಗಡಿಯನ್ನ ದಾಟಿ ದಾಳಿ ನಡೆಸಿತ್ತು.ಈ ವೇಳೆ 300 ಮಂದಿ ಮೃತಪಟ್ಟಿದ್ದಾರೆ. ನಮ್ಮ ಗುರಿ ಅವರ ಗುರಿಗಿಂತಲೂ ವಿಭಿನ್ನವಾಗಿತ್ತು. ನಾವು ಅವರ ಹೈಕಮಾಂಡ್ನನ್ನು ಗುರಿಯಾಗಿಸಿದ್ದೆವು. ನಮ್ಮದು ನ್ಯಾಯಯುತ ಗುರಿಯಾಗಿತ್ತು. ನಾನು ಪರೋಕ್ಷವಾಗಿ ಸರ್ಜಿಕಲ್ ಸ್ಟ್ರೈಕ್ನ್ನು ಒಪ್ಪಿಕೊಂಡಿದ್ದೇವೆ. ಅದರಲ್ಲಿ ಯಾವುದೇ ಸಾವು ನೋವಾಗಿಲ್ಲ'' ಎಂದು ಹೇಳಿಕೆ ನೀಡಿದ್ದಾರೆ.
ಆಗಿದ್ದೇನು:
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಭಾರತೀಯ ವಾಯುಪಡೆ ಫೆ.26ರಂದು ಪಾಕಿಸ್ತಾನದ ಬಾಲಾಕೋಟ್‌ನಲ್ಲಿದ್ದ ಉಗ್ರರ ನೆಲೆಗಳ ಮೇಲೆ ಬಾಂಬ್ ದಾಳಿ ನಡೆಸಿತ್ತು. ಮಿರಾಜ್ ವಿಮಾನಗಳು ಈ ವೈಮಾನಿಕ ದಾಳಿ ನಡೆಸಿದ್ದು, 12 ಮಿರಾಜ್- 2000 ಜೆಟ್ ವಿಮಾನಗಳು 1000 ಪೌಂಡ್ ತೂಕದ ಬಾಂಬ್‍ನಿಂದ ಗಡಿ ನಿಯಂತ್ರಣ ರೇಖೆಯಿಂದಾಚೆಯಿರುವ ಉಗ್ರರ ಶಿಬಿರಗಳನ್ನು ನಿರ್ನಾಮ ಮಾಡಿದ್ದವು.
PublicNext
10/01/2021 08:04 am