ಕಠ್ಮಂಡು: ನೇಪಾಳದ ಆಡಳಿತಾರೂಢ ಕಮ್ಯೂನಿಸ್ಟ್ ಪಾರ್ಟಿಯ ಆಂತರಿಕ ಬಿಕ್ಕಟ್ಟು ಈಗ ಹೊಸ ಸ್ವರೂಪ ಪಡೆದುಕೊಂಡಿದ್ದು, ಪುಷ್ಪಕಮಲ್ ದಹಲ್(ಪ್ರಚಂಡ) ನೇತೃತ್ವದ ಬಣವು ಭಾನುವಾರ ಏಕಾಏಕಿ ಪ್ರಧಾನಿ ಕೆ.ಪಿ.ಶರ್ಮ ಒಲಿ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ವಜಾ ಮಾಡಿದೆ.
ಮಾಜಿ ಪ್ರಧಾನಿಗಳಾದ ಪ್ರಚಂಡ ಹಾಗೂ ಮಾಧವ್ ಕುಮಾರ್ ನೇಪಾಲ್ ನೇತೃತ್ವದ ನಡೆದ ಪಕ್ಷದ ಸ್ಥಾಯಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ನೇಪಾಳ ಸಂಸತ್ ಅನ್ನು ತುರ್ತಾಗಿ ವಿಸರ್ಜಿಸಿರುವ ಬೆನ್ನಲ್ಲೇ ರಾಜಕೀಯ ಅಸ್ಥಿರತೆ ಮನೆ ಮಾಡಿದೆ. ಈಗ ಬಿಕ್ಕಟ್ಟು ಮತ್ತಷ್ಟು ಬಿಗಡಾಯಿಸಿದೆ.
ಇತ್ತ ವಿರೋಧ ಬಣದ ವಕ್ತಾರ ನಾರಾಯಣಕಾಜಿ ಶ್ರೇಷ್ಠ ಪ್ರಕಾರ, ಪ್ರಧಾನಿ ಒಲಿ ಇನ್ನು ಮುಂದೆ ಎನ್‌ಸಿಪಿ ಪಕ್ಷದ ಸದಸ್ಯರಾಗಿರುವುದಿಲ್ಲ ಎಂದು ತಿಳಿಸಿದ್ದಾರೆ.
PublicNext
25/01/2021 08:23 am