ವಾಷಿಂಗ್ಟನ್: ಪ್ರಪಂಚದಲ್ಲಿ ಕೆಲವು ವ್ಯಕ್ತಿಗಳು ಕೇವಲ ಮಾನವ ರೂಪ ಪಡೆದುಕೊಂಡು ಬಂದಿರುತ್ತಾರೆಯೇ ಹೊರತು ಅವರುಗಳಿಗೆ ಕಿಂಚಿತ್ತೂ ಮಾನವೀಯತೆ ಇರುವುದಿಲ್ಲ ೆನ್ನುವುದಕ್ಕೆ ಇಲ್ಲೊಬ್ಬ ರಾಕ್ಷಸ ರೂಪಿ ಮನುಷ್ಯನೇ ಸಾಕ್ಷಿ.. ಹೌದು ತ್ರಿವಳಿ ಕೊಲೆ ಮಾಡಿದ ವ್ಯಕ್ತಿ ಮೃತಪಟ್ಟ ಮಹಿಳೆಯ ಹೃದಯವನ್ನು ದೇಹದಿಂದ ಹೊರತೆಗೆದು ಆಲೂಗಡ್ಡೆಯೊಂದಿಗೆ ಬೇಯಿಸಿ, ಮತ್ತಿಬ್ಬರನ್ನು ಕೊಲ್ಲುವ ಮುನ್ನ ಉಣಬಡಿಸಿರುವ ಭಯಾನಕ ಘಟನೆ ಅಮೆರಿಕಾದ ಒಕ್ಲಹೋಮದಲ್ಲಿ ನಡೆದಿದೆ.
ಆರೋಪಿಯನ್ನು ಲಾರೆನ್ಸ್ ಪಾಲ್ ಆಂಡರ್ಸನ್ ಎಂದು ಗುರುತಿಸಲಾಗಿದ್ದು, ಆರೋಪಿ ನೆರೆಮನೆಯವಳನ್ನು ಕೊಂದು ಆಕೆಯ ಹೃದಯವನ್ನು ಕತ್ತರಿಸಿ ಹೊರತೆಗೆದಿದ್ದಾನೆ. ಬಳಿಕ ಹೃದಯವನ್ನು ಆರೋಪಿ ತನ್ನ ಚಿಕ್ಕಪ್ಪನ ಮನೆಗೆ ತೆಗೆದುಕೊಂಡು ಹೋಗಿ ಆಲೂಗಡ್ಡೆಯೊಂದಿಗೆ ಬೇಯಿಸಿ, ತನ್ನ ಕೈಯಾರೆ ಚಿಕ್ಕಪ್ಪ ಮತ್ತು ಅವರ ಪತ್ನಿಗೆ ಉಣಬಡಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಳಿಕ ಆರೋಪಿ ತನ್ನ ಚಿಕ್ಕಪ್ಪ ಮತ್ತು ಅವರ ನಾಲ್ಕು ವರ್ಷದ ಪುತ್ರಿಯನ್ನು ಕೊಂದಿದ್ದಾನೆ. ಜೊತೆಗೆ ಚಿಕ್ಕಮ್ಮನ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ್ದಾನೆ.
ಸುಮಾರು 20 ವರ್ಷದಿಂದ ಮಾದಕದ್ರವ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿದ್ದ ಆರೋಪಿಯನ್ನು ಒಕ್ಲಹೋಮ ಗವರ್ನರ್ ಕೆವಿನ್ ಸ್ಟಿಟ್, ಕೆಲವು ವಾರಗಳ ಹಿಂದೆಯಷ್ಟೇ ಬಿಡುಗಡೆಗೊಳಿಸಿದ್ದರು. ಆರೋಪಿ ಬಿಡುಗಡೆ ನಂತರ ಈ ಘಟನೆ ಸಂಭವಿಸಿದೆ.
PublicNext
25/02/2021 12:30 pm