ದೆಹಲಿ: ಪಾಕಿಸ್ತಾನದಲ್ಲಿ ಹಿಂದೂ ದೇವಾಲಯಗಳನ್ನು ನಾಶಗೊಳಿಸುವುದು ಸಾಮಾನ್ಯವಾದಂತಿದೆ. ಸದ್ಯ ಮುಸ್ಲಿಮರ ಗುಂಪೊಂದು ಸಿದ್ಧಿವಿನಾಯಕ ದೇವಸ್ಥಾನವನ್ನು ಧ್ವಂಸಗೊಳಿಸಿದ ವಿಡಿಯೋ ವೈರಲ್ ಆಗಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿರುವ ದೇಗುಲ ಇದಾಗಿದ್ದು,ಇಲ್ಲಿದ್ದ ದೇವರ ವಿಗ್ರಹವನ್ನು ಅಪವಿತ್ರಗೊಳಿಸಿದ್ದಲ್ಲೆ, ಅದನ್ನು ಭಾಗಶಃ ಸುಟ್ಟುಹಾಕಲಾಗಿದೆ. ರಹೀಮ್ ಖಾನ್ ಯಾರ್ ಖಾನ್ ಜಿಲ್ಲೆಯಲ್ಲಿರುವ, ಭೋಂಗ್ ನಗರದಲ್ಲಿ ಈ ಸಿದ್ಧಿವಿನಾಯಕ ದೇವಸ್ಥಾನ ಇತ್ತು.
ಲಾಹೋರ್ ನಲ್ಲಿರುವ ಮುಸ್ಲಿಮರಿಗೆ ಸಂಬಂಧಪಟ್ಟ ಸಂಸ್ಥೆಯನ್ನೊಂದು ನಾಶಗೊಳಿಸಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯೆಯಾಗಿ ಹೀಗೆ ಸಿದ್ಧಿವಿನಾಯಕ ದೇಗುಲ ನಾಶಗೊಳಿಸಿದ್ದಾಗಿ ಆ ಗುಂಪು ಹೇಳಿಕೊಂಡಿದೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಅಲ್ಲಿ ಪಾಕಿಸ್ತಾನ ರೇಂಜರ್ಸ್ ನ್ನು ರಕ್ಷಣೆಗೆ ನಿಯೋಜಿಸಲಾಗಿದೆ. ಇನ್ನು ದೇಗುಲ ಸುತ್ತಮುತ್ತ 100 ಹಿಂದೂ ಕುಟುಂಬಗಳು ಇದ್ದು, ಅವರೀಗ ಅಪಾಯದಲ್ಲಿದ್ದಾರೆ. ಎಲ್ಲ ರೀತಿಯ ಭದ್ರತಾ ಕ್ರಮಗಳನ್ನೂ ವಹಿಸಲಾಗಿದೆ ಎಂದೂ ಸ್ಥಳೀಯ ಸರ್ಕಾರ ತಿಳಿಸಿದೆ.
PublicNext
05/08/2021 04:25 pm