ಕಾಬೂಲ್: ಆಫ್ಘಾನ ತಾಲಿಬಾನ್ ವಶವಾದ ಬೆನ್ನಲ್ಲೇ ಆಫ್ಘಾನ್ ಅಧ್ಯಕ್ಷರ ವಿರುದ್ಧ ರಕ್ಷಣಾ ಸಚಿವರ ಕಿಡಿಕಾರಿದ್ದಾರೆ.ತಾಲಿಬಾನಿಗಳು ಅಂದುಕೊಂಡದ್ದಕ್ಕಿಂತ ವೇಗವಾಗಿ ಕಾಬೂಲ್ ಗೆ ಲಗ್ಗೆ ಇಟ್ಟಿದ್ದರು. ಇದರಿಂದ ಹೆದರಿ ತಾಲಿಬಾನಿಗಳಿಗೆ ಅಧಿಕಾರ ಹಸ್ತಾಂತರ ಮಾಡಿದ ಅಧ್ಯಕ್ಷರು ದೇಶ ಬಿಟ್ಟು ಪಲಾಯನ ಮಾಡಿದ್ದಾರೆ ಎಂದು ಅಧ್ಯಕ್ಷ ಅಶ್ರಫ್ ಘನಿ ವಿರುದ್ಧ ರಕ್ಷಣಾ ಸಚಿವರು ಕಿಡಿಕಾರಿದ್ದಾರೆ.
ಅಧ್ಯಕ್ಷ ನಮ್ಮ ಕೈಗಳನ್ನು ಕಟ್ಟಿ ಹಾಕಿ ಉಗ್ರರಿಗೆ ದೇಶವನ್ನು ಮಾರಾಟ ಮಾಡಿದ್ದಾರೆ ಎಂದು ರಕ್ಷಣಾ ಸಚಿವ ಬಿಸ್ಮಿಲ್ಲಾ ಮೊಹಮ್ಮದಿ ಟ್ವೀಟ್ ಮಾಡಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಸಂಕಷ್ಟದ ಸಮಯದಲ್ಲಿ ದೇಶದ ಹಿತ ಕಾಯುವ ಬದಲು ಮೂರ್ಖತನದ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ತಾಲಿಬಾನಿಗಳಿಗೆ ಅಧಿಕಾರ ಹಸ್ತಾಂತರಿಸಿದ ನಂತರ ಅಶ್ರಫ್ ಘನಿ ತಜಕಿಸ್ತಾನಕ್ಕೆ ಪಲಾಯನ ಮಾಡಿದ್ದಾರೆ ಎಂದು ವರದಿಯಾಗಿತ್ತು. ಇಂದು ಓಮನ್ ನಲ್ಲಿ ಪ್ರತ್ಯಕ್ಷರಾಗಿದ್ದು ಅಲ್ಲಿಂದ ಅಮೆರಿಕಕ್ಕೆ ತೆರಳುತ್ತಿದ್ದಾರೆ ಎಂದು ವರದಿಯಾಗಿದೆ.
PublicNext
16/08/2021 08:31 pm