ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಬೂಲ್ ನಿಂದ 85 ಭಾರತೀಯರ ಪ್ರಯಾಣ

ನವದೆಹಲಿ : ಕಾಬೂಲ್ ನ್ನು ತಾಲಿಬಾನ್ ವಶಕ್ಕೆ ಪಡೆದ ನಂತರ ಅಲ್ಲಿರುವ ಭಾರತೀಯರನ್ನು ಸ್ಥಳಾಂತರಿಸಲು ಪ್ರಯತ್ನಿಸಲಾಗುತ್ತಿದ್ದು, 85 ಭಾರತೀಯರನ್ನು ಹೊತ್ತ ಭಾರತೀಯ ವಾಯುಪಡೆಯ ಸಿ-130 ಜೆ ವಿಮಾನ ಶನಿವಾರ ಬೆಳಗ್ಗೆ ಕಾಬೂಲ್ ನಿಂದ ಪ್ರಯಾಣ ಆರಂಭಿಸಿದೆ. ಅಫ್ಘಾನಿಸ್ತಾನದಲ್ಲಿರುವ ಭಾರತೀಯ ನಾಗರೀಕರನ್ನು ತೆರವುಗೊಳಿಸುವ ಕಾರ್ಯವನ್ನು ಭಾರತ ಸರ್ಕಾರ ಮುಂದುವರಿಸಿದೆ.

ಭಾರತವು ತನ್ನೆಲ್ಲಾ ಡಿಪ್ಲೊಮಾಟಿಕ್ ಸಿಬ್ಬಂದಿಯನ್ನು ಅಫ್ಘಾನಿಸ್ತಾನದಿಂದ ಈ ಮೊದಲೇ ತೆರವುಗೊಳಿಸಿತ್ತು. ಆದರೆ ತಾಲಿಬಾನ್ ಮುಷ್ಠಿಯಲ್ಲಿರುವ ಅಫ್ಘಾನಿಸ್ತಾನದ ಹಲವು ನಗರಗಳಲ್ಲಿ ಸುಮಾರು 1,000 ಭಾರತೀಯರು ಇನ್ನೂ ಇದ್ದಾರೆ. ಇವರಲ್ಲಿ ಎಲ್ಲರೂ ಭಾರತೀಯ ಎಂಬೆಸಿಯಲ್ಲಿ ನೋಂದಣಿ ಮಾಡಿಕೊಂಡಿಲ್ಲವಾದ್ದರಿಂದ, ಅವರಿರುವ ಸ್ಥಳ ಮತ್ತು ಪರಿಸ್ಥಿತಿಗಳನ್ನು ಪತ್ತೆ ಹಚ್ಚುವುದು ದೊಡ್ಡ ಸವಾಲಾಗಿದೆ ಎಂದು ಗೃಹ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.

Edited By : Nirmala Aralikatti
PublicNext

PublicNext

21/08/2021 01:06 pm

Cinque Terre

122.32 K

Cinque Terre

0