ಕಾಬೂಲ್: ಅಫ್ಘಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದ ಹೊರಗಡೆ ಗುರುವಾರ ಸಂಭವಿಸಿದ ಸರಣಿ ಬಾಂಬ್ ದಾಳಿಯಲ್ಲಿ ಅಮೆರಿಕದ 13 ಸೈನಿಕರು ಸೇರಿ ಒಟ್ಟು 73 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದ್ದಾರೆ. ಈ ಭೀಕರ ದಾಳಿ ಮಾಡಿದ್ದು ತಾವೇ ಎಂದು ಉಗ್ರ ಸಂಘಟನೆ ಐಸಿಸ್-ಕೆ ಒಪ್ಪಿಕೊಂಡಿದೆ. ಉಗ್ರ ಸಂಘಟನೆಯ ಕೃತ್ಯವನ್ನು ಅಮೆರಿಕ, ಭಾರತ, ಬ್ರಿಟನ್ ಸೇರಿ ವಿಶ್ವದ ಹಲವು ರಾಷ್ಟ್ರಗಳು ಹಾಗೂ ವಿಶ್ವ ಸಂಸ್ಥೆ ಖಂಡಿಸಿವೆ.
ದಾಳಿಯ ಬಳಿಕವೂ ನಾವು ರಕ್ಷಣಾ ಕಾರ್ಯಾಚರಣೆ ಮುಂದುವರಿಸುತ್ತೇವೆ ಎಂದು ಅಮೆರಿಕಾ ಕಮಾಂಡರ್ ಸ್ಪಷ್ಟಪಡಿಸಿದ್ದಾರೆ. ದಾಳಿಯಲ್ಲಿ 140ಕ್ಕೂ ಹೆಚ್ಚು ಅಫ್ಘನ್ನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ವಿಶ್ವ ಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ, ಕಾಬೂಲ್ ದಾಳಿ ಖಂಡಿಸಿದ್ದಾರೆ. ಇದು ಅಫ್ಘಾನಿಸ್ತಾನದ ಸ್ಥಿತಿಯನ್ನ ತೋರಿಸುತ್ತದೆ ಎಂದು ಹೇಳಿದ್ದಾರೆ.
PublicNext
27/08/2021 08:11 am