ಕಾಬೂಲ್: ಅಫ್ಘಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಈವರೆಗೆ ಒಟ್ಟು 103 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಂತರರಾಷ್ಟ್ರೀಯ ಪತ್ರಿಕೆಯೊಂದು ವರದಿ ಮಾಡಿದೆ.
ಮೃತರ ಪೈಕಿ 13 ಅಮೆರಿಕದ ಸೈನಿಕರು ಹಾಗೂ 90 ಮಂದಿ ಆಫ್ಘನ್ ಪ್ರಜೆಗಳು ಎನ್ನಲಾಗಿದೆ. ಕಾಬೂಲ್ ವಿಮಾನ ನಿಲ್ದಾಣದ ಅಬ್ಬೆ ಗೇಟ್ ಬಳಿ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ ವ್ಯಕ್ತಿ ಕೈನಲ್ಲಿ ಬಂದೂಕು ಹಿಡಿದಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಇತ್ತ ಏರ್ಪೋರ್ಟ್ ಹತ್ತಿರ ಹೋಟೆಲ್ ಒಂದರಲ್ಲೂ ಬಾಂಬ್ ಸ್ಫೋಟಗೊಂಡಿದೆ.
ಈ ದುಷ್ಕೃತ್ಯದಲ್ಲಿ 130ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಫೋಟದ ಬೆನ್ನಲ್ಲೇ ಏರ್ಪೋರ್ಟ್ನಿಂದ ತಮ್ಮ ದೇಶದ ಪ್ರಜೆಗಳನ್ನು ವಾಪಸ್ ಕರೆಸಿಕೊಳ್ಳುತ್ತಿದ್ದ ಬಹುತೇಕ ದೇಶಗಳು ತಮ್ಮ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿವೆ.
PublicNext
27/08/2021 10:21 am