ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಭಾನುವಾರ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಅರೆಸೇನಾ ಪಡೆಯ ಮೂವರು ಸಾವನ್ನಪ್ಪಿದ್ದು, ಇಬ್ಬರು ನಾಗರಿಕರು ಸೇರಿ 20 ಮಂದಿ ಗಾಯಗೊಂಡಿದ್ದಾರೆ.
'ಫ್ರಾಂಟಿಯರ್ ಕಾನ್‌ಸ್ಟಾಬ್ಯುಲರಿ ಗಾರ್ಡ್ಸ್ ಅನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ. ಅಫ್ಘಾನಿಸ್ತಾನ ಗಡಿಯ ಬಳಿಯಿರುವ ನಗರದ ಮಿಯಾನ್ ಗುಂಡಿಯಲ್ಲಿ ಮೋಟರ್ ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಇದರಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರು ನಾಗರಿಕರು ಸೇರಿದಂತೆ 20 ಮಂದಿಗೆ ಗಾಯಗಳಾಗಿವೆ' ಎಂದು ಸ್ಥಳೀಯ ಹಿರಿಯ ಪೊಲೀಸ್ ಅಧಿಕಾರಿ ಅಜರ್ ಅಕ್ರಮ್ ಮಾಹಿತಿ ನೀಡಿದ್ದಾರೆ.
ತೆಹ್ರಿಕ್-ಇ-ತಾಲಿಬಾನ್ ಪಾಕಿಸ್ತಾನ (ಟಿಟಿಪಿ) ದಾಳಿಯ ಹೊಣೆ ಹೊತ್ತಿದೆ ಎಂದು ಡಾನ್ ವರದಿ ಮಾಡಿದೆ. ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ದಾಳಿಯನ್ನು ಖಂಡಿಸಿದ್ದಾರೆ.
PublicNext
05/09/2021 03:43 pm