ಕಾಬೂಲ್: ಪಂಜ್‌ಶೀರ್ ಪ್ರಾಂತ್ಯವನ್ನು ತಾಲಿಬಾನ್ ವಶಪಡಿಸಿಕೊಂಡಿರುವ ಬಗ್ಗೆ ಸುದ್ದಿಗಳು ಹರಿದಾಡುತ್ತಿರುವಾಗಲೇ ಅಫ್ಘಾನಿಸ್ತಾನದ ಮಾಜಿ ಉಪಾಧ್ಯಕ್ಷ ಅಮ್ರುಲ್ಲಾ ಸಲೇಹ್, 'ನಾನು ಎಂದಿಗೂ ತಾಲಿಬಾನ್‌ಗೆ ಶರಣಾಗತನಾಗುವುದಿಲ್ಲ. ಒಂದು ವೇಳೆ ಗಾಯಗೊಂಡು ಶರಣಾಗತನಾಗುವ ಪರಿಸ್ಥಿತಿ ಉದ್ಭವಿಸಿದರೆ ತನ್ನ ತಲೆಗೆ ಗುಂಡಿಟ್ಟು ಹತ್ಯೆ ಮಾಡಿ' ಎಂದು ತಮ್ಮ ಅಂಗರಕ್ಷಕನಿಗೆ ಸೂಚನೆ ನೀಡಿದ್ದಾರೆ.
ಕಾಬೂಲ್ ತಾಲಿಬಾನಿಗಳ ವಶವಾಗಿದ್ದು ಹೇಗೆ ಎಂಬ ಕುರಿತು ಡೈಲಿ ಮೇಲ್ ವೆಬ್‌ಸೈಟ್‌ನಲ್ಲಿ ಲೇಖನ ಬರೆದಿರುವ ಸಲೇಹ್, 'ಮಾಜಿ ಅಧ್ಯಕ್ಷ ಅಶ್ರಫ್ ಘನಿ ಮತ್ತು ಇತರ ಅಧಿಕಾರಿಗಳು ದೇಶಬಿಟ್ಟು ಪರಾರಿ ಆಗುವ ಮೂಲಕ ಜನತೆಗೆ ದ್ರೋಹ ಎಸಗಿದ್ದಾರೆ. ಅವರು ವಿದೇಶಿ ಹೋಟೆಲ್ ಮತ್ತು ವಿಲ್ಲಾಗಳಲ್ಲಿ ಉಳಿದುಕೊಂಡಿದ್ದಾರೆ ಮತ್ತು ಅಫ್ಘಾನಿಸ್ತಾನ ಜನರ ಬಳಿ ದಂಗೆ ಏಳುವಂತೆ ಕರೆ ನೀಡಿದ್ದಾರೆ. ಆದರೆ ಇದು ಹೇಡಿತನ ಕೃತ್ಯ. ನಾವು ದಂಗೆಯನ್ನು ಬಯಸಿದರೆ ದಂಗೆಯನ್ನು ಸ್ವತಃ ಮುನ್ನಡೆಸಬೇಕು' ಎಂದು ಹೇಳಿದ್ದಾರೆ.
PublicNext
06/09/2021 09:45 am