ಟೋಕಿಯೊ: ಜಪಾನ್ ನ ಮುಂದಿನ ಪ್ರಧಾನಿಯಾಗಿ ಫುಮಿಯೋ ಕಿಶಿಡಾ ಅವರನ್ನು ಆಯ್ಕೆ ಮಾಡಲಾಗಿದೆ. ಆಡಳಿತ ನಾಯಕತ್ವದ ಚುನಾವಣೆಯಲ್ಲಿ ಬಂದ ಫಲಿತಾಂಶದ ಪ್ರಕಾರ ಫುಮಿಯೋ ಕಿಶಿಡಾ ಅವರು ಜಪಾನಿನ ಮುಂದಿನ ಪ್ರಧಾನಿಯಾಗಲಿದ್ದಾರೆ.
ಈ ಮೂಲಕ ಫುಮಿಯೊ ಕಿಶಿದ ಅವರು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆ ಹೊಂದಿರುವ ರಾಷ್ಟ್ರದ ಪ್ರಧಾನಿ ಪಟ್ಟವನ್ನು ಅಲಂಕರಿಸಲಿದ್ದಾರೆ.
ಆಡಳಿತಾರೂಢ ಎಲ್ ಡಿಪಿ ಪಕ್ಷ ಸಂಸತ್ತಿನಲ್ಲಿ ಬಹುಮತ ಹೊಂದಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 4ರಂದು ಸಂಸತ್ತಿ ನಲ್ಲಿ ನಡೆಯುವ ಚುನಾವಣೆಯಲ್ಲಿ, 64ರ ಹರೆಯದ ಫುಮಿಯಾ ಅವರು ಹೊಸ ಪ್ರಧಾನಿಯಾಗಿ ಅಧಿಕೃತವಾಗಿ ಆಯ್ಕೆಯಾಗುತ್ತಾರೆ. ನಂತರ ಪುಮಿಯಾ ಅವರು ನವೆಂಬರ್ ತಿಂಗಳಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸಲಿದ್ದಾರೆ.
PublicNext
29/09/2021 02:20 pm