ಕಾಬೂಲ್: ಅಫ್ಘಾನಿಸ್ತಾನದ ಮಸೀದಿಯಲ್ಲಿ ನಡೆದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 100ಕ್ಕೆ ಏರಿಕೆಯಾಗಿದೆ.
ದಾಳಿಯಲ್ಲಿ ಕನಿಷ್ಠ 100 ಮಂದಿ ಮೃತಪಟ್ಟಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದು ಅಮೆರಿಕ ಪಡೆಗಳು ಅಫ್ಗಾನಿಸ್ತಾನ ತೊರೆದ ಬಳಿಕ ನಡೆದ ಭೀಕರ ಆತ್ಮಹತ್ಯಾ ಬಾಂಬ್ ದಾಳಿ ಎನ್ನಲಾಗಿದೆ. ದಾಳಿ ವೇಳೆ ಮಸೀದಿಯಲ್ಲಿದ್ದವರಲ್ಲಿ ಹೆಚ್ಚಿನವರು ಮೃತಪಟ್ಟಿದ್ದಾರೆ ಎಂದು ಕುಂದುಜ್ ಪ್ರಾಂತ್ಯದ ಉಪ ಪೊಲೀಸ್ ಮುಖ್ಯಸ್ಥ ಮೊಹಮ್ಮದ್ ಒಬೈದಾ ಹೇಳಿದ್ದಾರೆ. ಮಸೀದಿಯ ಒಳಗೆ ಪ್ರಾರ್ಥನೆ ನಡೆಸುತ್ತಿದ್ದವರ ನಡುವೆ ಬೆರೆತು ಆತ್ಮಹತ್ಯಾ ಬಾಂಬರ್ ದಾಳಿ ನಡೆಸಿರಬಹುದು ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.
PublicNext
09/10/2021 07:57 am