ಮಾಸ್ಕೋ: ರಷ್ಯಾ-ಉಕ್ರೇನ್ ದೇಶದ ಸಂಘರ್ಷ ತಾರಕ್ಕಕೇರಿದ್ದು, ದಾಳಿ- ಪ್ರತಿದಾಳಿಯ ಹಂತ ತಲುಪಿದೆ. ಇಂದು ಉಕ್ರೇನ್ ಮೇಲೆ ರಷ್ಯಾ ಮಿಲಿಟರಿ ಆಪರೇಷನ್ ಘೋಷಣೆ ಮಾಡಿದೆ. ಈ ವಿಚಾರವನ್ನು ಸ್ವತಃ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿಕೊಂಡಿದ್ದಾರೆ.
'ಪೂರ್ವ ಉಕ್ರೇನ್‌ನಲ್ಲಿ ರಷ್ಯಾ ಮಿಲಿಟರಿ ಕಾರ್ಯಾಚರಣೆ ನಡೆಸಲಿದೆ' ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ಇದಕ್ಕೂ ಮುನ್ನ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು, "ನಮ್ಮ ಭೂಮಿ, ನಮ್ಮ ಸ್ವಾತಂತ್ರ್ಯ, ನಮ್ಮ ಜೀವನ, ನಮ್ಮ ಮಕ್ಕಳ ಜೀವನವನ್ನು ಯಾರಾದರೂ ಕಸಿದುಕೊಳ್ಳಲು ಪ್ರಯತ್ನಿಸಿದರೆ, ನಾವು ನಮ್ಮನ್ನು ರಕ್ಷಿಸಿಕೊಳ್ಳುತ್ತೇವೆ" ಎಂದು ಹೇಳಿದ್ದರು. ಈ ಹೇಳಿಕೆ ಬೆನ್ನಲ್ಲೇ ರಷ್ಯಾ ಮಿಲಿಟರಿ ಕಾರ್ಯಾಚರಣೆ ಕೈಗೊಂಡಿದೆ.
ಇದಕ್ಕೂ ಮೊದಲು, ವಿಶ್ವ ಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಪುಟಿನ್ ಅವರು, "ಉಕ್ರೇನ್ ಮೇಲೆ ದಾಳಿ ಮಾಡುವುದನ್ನು ನಿಲ್ಲಿಸುವಂತೆ ರಷ್ಯಾಗೆ ಕೇಳಿಕೊಂಡಿದ್ದರು.
PublicNext
24/02/2022 09:50 am