ನವದೆಹಲಿ: ಏಕಾಏಕಿ ಉಕ್ರೇನ್ ಮೇಲೆ ದಾಳಿ ಮಾಡಿರುವ ರಷ್ಯಾ ನಡೆ ಜಾಗತಿಕ ಯುದ್ದಕ್ಕೆ ಕಾರಣವಾಗುತ್ತದೆ ಎನ್ನುವ ತಜ್ಞರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇನ್ನು ಈ ಯುದ್ಧ ಆರಂಭವಾಗುತ್ತಿದ್ದಂತೆ ಪ್ರಧಾನಿ ಮೋದಿ ಮಧ್ಯಪ್ರವೇಶಿಸಬೇಕೆಂಬ ಮಾತು ಕೇಳಿಬಂದಿರುವ ಬೆನ್ನಲ್ಲೇ ಇದೀಗ ಮೋದಿ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಜೊತೆ ಇಂದು ರಾತ್ರಿ ಮಾತುಕತೆಗೆ ಮುಂದಾಗಿದ್ದಾರೆ ಎಂದು ವರದಿಯಾಗಿದೆ.
ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಅರಂಭಿಸುತ್ತಿದ್ದಂತೆ ಭಾರತದಲ್ಲಿರುವ ಉಕ್ರೇನ್ ರಾಯಭಾರಿ ಇಗೂರ್ ಪೋಲಿಖಾ, ಮೋದಿಯವರು ರಷ್ಯಾ ಅಧ್ಯಕ್ಷರಾದ ಪುಟಿನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆ ಮಾತುಕತೆ ನಡೆಸಬೇಕು. ಈಗಾಗಲೇ ಯುದ್ಧ ಆರಂಭವಾಗಿದೆ. ಇದರಿಂದ ಉಕ್ರೇನ್ ನಾಗರೀಕರು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದರು.
PublicNext
24/02/2022 09:28 pm