ಕೈವ್: ಪೂರ್ವ ಉಕ್ರೇನ್ ಮೇಲೆ ರಷ್ಯಾ ಸೇನಾ ಕಾರ್ಯಾಚರಣೆ ನಡೆಸಿದ್ದು, ಎಲ್ಲೇಡೆ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಇದರಿಂದಾಗಿ ಉಕ್ರೇನ್ ರಾಷ್ಟ್ರದ ರಾಜಧಾನಿ ಕೈವ್‌ನಲ್ಲಿರುವ ಭಾರತದ ರಾಯಭಾರ ಕಚೇರಿ ಸಮೀಪದ ಶಾಲೆಯಲ್ಲಿ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳಿಗೆ ಆಶ್ರಯ ಕಲ್ಪಿಸಲಾಗಿದೆ.
ರಷ್ಯಾ-ಉಕ್ರೇನ್ ಬಿಕ್ಕಟ್ಟು ಹಿನ್ನೆಲೆಯಲ್ಲಿ ಪೂರ್ವ ಯುರೋಪಿಯನ್ ರಾಷ್ಟ್ರದಿಂದ ಭಾರತೀಯರನ್ನು ಮರಳಿ ಕರೆತರಲು ನಿನ್ನೆ (ಗುರುವಾರ) ಬೆಳಗ್ಗೆ ಉಕ್ರೇನ್‌ನ ಕೈವ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ರಷ್ಯಾದ ಮಿಲಿಟರಿ ದಾಳಿಯ ಮಧ್ಯೆ ಉಕ್ರೇನ್‌ನಲ್ಲಿ ವಾಯುಪ್ರದೇಶವನ್ನು ಮುಚ್ಚಿದ್ದರಿಂದ ದೆಹಲಿಗೆ ಹಿಂತಿರುಗಿತ್ತು. ಪರಿಣಾಮ ಕೈವ್ ವಿಮಾನ ನಿಲ್ದಾಣಕ್ಕೆ ಬಂದಿದ್ದ 200ಕ್ಕೂ ಹೆಚ್ಚು ವಿದ್ಯಾರ್ಥಿಗಳ ರಕ್ಷಣೆ ಜವಾಬ್ದಾರಿಯನ್ನು ಭಾರತದ ರಾಯಭಾರ ಕಚೇರಿಯು ಹೊತ್ತಿದೆ.
PublicNext
25/02/2022 07:52 am