ಬೆಂಗಳೂರು : ನಿಲ್ಲದ ಉಕ್ರೇನ್ - ರಷ್ಯಾ ಯುದ್ಧದ ಸ್ಥಳದಿಂದ ಮರಳಿ ತಾಯ್ನಾಡಿಗೆ ಬರಲಾಗದ ಸ್ಥಿತಿಯಲ್ಲಿದ್ದ ಕನ್ನಡಿಗನ ಮಾತು ಕೇಳಿದರೆ ಕರುಳು ಹಿಂಡಿದಂತಾಗುತ್ತದೆ.
ಹೌದು ಮಂಗಳವಾರವಷ್ಟೇ ಉಕ್ರೇನ್ ನಲ್ಲಿ ಶೆಲ್ ದಾಳಿಗೆ ಬಲಿಯಾದ ಹಾವೇರಿಯ ನವೀನ್ ಸ್ನೇಹಿತ ಶ್ರೀಕಾಂತ್ ತಮ್ಮ ಮನೆಯವರ ಜೊತೆ ಮಾತನಾಡಿದ ನೋವಿನ ಮಾತು ಇಲ್ಲಿವೆ ನೋಡಿ.'ಯಾವ ಸಂದರ್ಭದಲ್ಲಾದರೂ ನಮ್ಮ ಮೇಲೆ ಬಾಂಬ್, ಶೆಲ್ ದಾಳಿ ನಡೆಯಬಹುದು. ಅಂತಿಮವಾಗಿ ನಡೆದುಕೊಂಡು ಬಂದೇ ರೈಲು ನಿಲ್ದಾಣ ಸೇರಿದ್ದೇವೆ. ಯಾವ ರೈಲು ಬರುತ್ತದೆ, ನಾವೆಲ್ಲಿಗೆ ಹೋಗುತ್ತೇವೆ' ಎಂಬ ಕಲ್ಪನೆಯೂ ಇಲ್ಲದಂತಾಗಿದೆ.
ಈಗಷ್ಟೇ ಸಾವಿರಕ್ಕೂ ಹೆಚ್ಚು ಭಾರತೀಯರು ರೈಲು ನಿಲ್ದಾಣಕ್ಕೆ ನಡೆದುಕೊಂಡೇ ಬಂದಿದ್ದೇವೆ. 250ಕ್ಕೂ ಹೆಚ್ಚು ಜನ ಕನ್ನಡಿಗರೇ ಇದ್ದೇವೆ. ವಿಪರೀತ ಮಂಜು,ಚಳಿ ತಡೆಯಲು ಆಗುತ್ತಿಲ್ಲ. ಯಾವ ರೈಲು, ಬರುತ್ತದೆ. ಎಲ್ಲಿಗೆ ಹೋಗುತ್ತೇವೆ ಒಂದು ಗೊತ್ತಿಲ್ಲ ಎಂದು ತಮ್ಮ ಕುಟುಂಬಕ್ಕೆ ಧ್ವನಿ ಸಂದೇಶದಲ್ಲಿ ಹೇಳಿದ್ದಾರೆ.
ಇದಕ್ಕೂ ಮೊದಲು ಉಕ್ರೇನ್ ನ ಬಂಕರ್ ನಲ್ಲಿ ಜೀವ ಕೈಯಲ್ಲಿಟ್ಟುಕೊಂಡು ಮಾತನಾಡಿದ ಶ್ರೀಕಾಂತ್, 'ಒಂದು ವೇಳೆ ಗುಂಡೇಟಿಗೆ ಸಾಯದಿದ್ದರೂ ಹೊಟ್ಟೆಗೆ ಊಟವಿಲ್ಲದೆ ಸಾಯುವುದು ಖಚಿತ' ಎಂದಿದ್ದರು.
PublicNext
03/03/2022 03:46 pm