ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಷ್ಯಾ ವಿರುದ್ಧ ಹೋರಾಡಲು ಉಕ್ರೇನ್ ಸೇನೆ ಸೇರಿಕೊಂಡ ಭಾರತದ ವಿದ್ಯಾರ್ಥಿ.!

ಚೆನ್ನೈ: ಭಾರತ, ಅಮೆರಿಕ, ಯುಕೆ ಸೇರಿದಂತೆ ಕೆಲವು ದೇಶಗಳ ವಿದ್ಯಾರ್ಥಿಗಳು, ಪ್ರಜೆಗಳು ಸ್ವಯಂಪ್ರೇರಿತರಾಗಿ ರಷ್ಯಾದ ವಿರುದ್ಧ ಹೋರಾಡಲು ಉಕ್ರೇನ್‌ ಸೇನೆಯನ್ನು ಸೇರಿದ್ದಾರೆ. ಈ ಸಂಬಂಧ ಉಕ್ರೇನ್‌ನ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಫೇಸ್‌ಬುಕ್‌ನಲ್ಲಿ ಫೋಟೋವನ್ನು ಹಂಚಿಕೊಂಡಿದೆ.

ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ 21 ವರ್ಷದ ವಿದ್ಯಾರ್ಥಿ ಸೈನಿಕೇಶ್ ರವಿಚಂದ್ರನ್ ಅವರು, ಉಕ್ರೇನ್‌ನ ಪ್ಯಾರಾ ಮಿಲಿಟರಿ ಪಡೆ ಸೇರಿದ್ದಾರೆ ಎಂದು ವರದಿಯಾಗಿದೆ. 2018ರಲ್ಲಿ ಸೈನಿಕೇಶ್ ಹಾರ್ಕಿವ್‌ನ ನ್ಯಾಶನಲ್ ಏರೊಸ್ಪೇಸ್ ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್‌ಗೆ ತೆರಳಿದ್ದರು. ಈ ವರ್ಷದ ಜುಲೈಗೆ ಅವರು ವಿದ್ಯಾಭ್ಯಾಸ ಪೂರ್ಣಗೊಳ್ಳುತ್ತಿತ್ತು.

ಉಕ್ರೇನ್ ಮತ್ತು ರಷ್ಯಾ ಸಂಘರ್ಷ ತೀವ್ರಗೊಂಡಿದ್ದು, ಪೋಷಕರು ಸೈನಿಕೇಶ್ ಜೊತೆಗಿನ ಸಂಪರ್ಕ ಕಳೆದುಕೊಂಡಿದ್ದಾರೆ. ಹೀಗಾಗಿ, ಪೋಷಕರು ರಾಯಭಾರ ಕಚೇರಿಯನ್ನು ಸಂಪರ್ಕಿಸಿದ್ದಾರೆ. ಬಳಿಕ, ಅಧಿಕಾರಿಗಳು ವಿದ್ಯಾರ್ಥಿಯನ್ನು ಸಂಪರ್ಕಿಸಿದಾಗ, ರಷ್ಯಾ ವಿರುದ್ಧ ಹೋರಾಡಲು ಉಕ್ರೇನ್‌ನ ಪ್ಯಾರಾಮಿಲಿಟರಿ ಪಡೆ ಸೇರಿರುವುದಾಗಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.

Edited By : Vijay Kumar
PublicNext

PublicNext

08/03/2022 01:28 pm

Cinque Terre

51.85 K

Cinque Terre

4

ಸಂಬಂಧಿತ ಸುದ್ದಿ